ಚಿತ್ರದುರ್ಗ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಿಂದ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಎಫ್ಐಡಿ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ.

‘ಕೆ-ಕಿಸಾನ್’ ತಂತ್ರಾಂಶದ ಮೂಲಕ ರೈತರ ಎಫ್ಐಡಿ ಸಂಖ್ಯೆ ಬಳಸಿಕೊಂಡು ಅವರು ಹೊಂದಿರುವ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಯೂರಿಯಾ ಅಗತ್ಯವಿದೆಯೋ ಅಷ್ಟನ್ನು ಮಾತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯುವುದು, ಮಿತವ್ಯಯವಾಗಿ ಗೊಬ್ಬರ ಬಳಸುವಂತೆ ಮಾಡುವುದು ಹಾಗೂ ಮಾರಾಟದ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ.

ಎಫ್ಐಡಿ ಹೊಂದಿಲ್ಲದವರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಹೊಸದಾಗಿ ಸಂಖ್ಯೆ ಪಡೆಯಬೇಕು. ಈಗಾಗಲೇ ಸಂಖ್ಯೆ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೇ ನಂಬರ್ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಬೇಕು. ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್ಐಡಿ ನಮೂದಿಸಿ ಯೂರಿಯಾ ಮಾರಾಟ ಮಾಡಬೇಕು. ಇಲ್ಲವಾದರೆ ಕ್ರಮ ಜರುಗಿಸಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-44-477235379

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.