ಚಿತ್ರದುರ್ಗ: ‘ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಮರ್ಪಕವಾಗಿದ್ದು, ಯಾವುದೇ ರೀತಿಯಲ್ಲಿ ಇಂಧನ ಕೊರತೆ ಇಲ್ಲ. ಇಂಧನ ಪೂರೈಕೆ ಎಂದಿನಂತೆ ಸಹಜವಾಗಿದೆ’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತೈಲ ಕಂಪನಿಗಳ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

‘ಇಂಧನದ ಅನಧಿಕೃತ ದಾಸ್ತಾನು ಇರಿಸುವುದು ಮತ್ತು ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಇತ್ತೀಚಿನ ದಿನಗಳಲ್ಲಿ ಔದ್ಯೋಗಿಕ ಮತ್ತು ವಾಣಿಜ್ಯ ಖರೀದಿದಾರರು ಬಂಕ್ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸುತ್ತಿರುವುದನ್ನು ತಡೆಗಟ್ಟಬೇಕು. ಬೃಹತ್ ಗ್ರಾಹಕರು ಪೆಟ್ರೋಲ್ ಬಂಕ್ಗಳ ಬದಲಾಗಿ, ಕಡ್ಡಾಯವಾಗಿ ತೈಲ ಕಂಪನಿಗಳ ಮುಖಾಂತರ ನೇರವಾಗಿ ಖರೀದಿಸಬೇಕು’ ಎಂದು ತಿಳಿಸಿದರು.

‘ಪೆಟ್ರೋಲ್ ಬಂಕ್ಗಳಲ್ಲಿ ಗ್ರಾಹಕರು ಪ್ಲಾಸ್ಟಿಕ್ ಕ್ಯಾನ್ಗಳಲ್ಲಿ ಡೀಸೆಲ್ ಖರೀದಿಸುವುದನ್ನು ಉತ್ತೇಜಿಸಬಾರದು. ಅನಧಿಕೃತ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟ, ಬಂಕ್ಗಳಲ್ಲಿ ಅಕ್ರಮ ದಾಸ್ತಾನು ಇಡದಂತೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಗ್ರಾಹಕರ ಬೇಡಿಕೆ ಪೂರೈಸಲು ತೈಲ ಕಂಪನಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

‘ಪ್ರಸ್ತುತ ಜಿಲ್ಲೆಯಲ್ಲಿ ಇಂಧನ ಪೂರೈಕೆ ಸಹಜವಾಗಿದೆ. ಕಂಪನಿಗಳಿಂದ ನಿರಂತರ ಸರಬರಾಜು ಆಗುತ್ತಿದೆ’ ಎಂದು ತೈಲ ಕಂಪನಿಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಐಒಸಿಎಲ್ ಮಾರುಕಟ್ಟೆ ಅಧಿಕಾರಿ ಪ್ರತಾಪ್, ಬಿಪಿಸಿಎಲ್ ಮಾರುಕಟ್ಟೆ ಅಧಿಕಾರಿ ಜಯಚಂದ್ರ, ಎಚ್ಪಿಸಿಎಲ್ ಮಾರುಕಟ್ಟೆ ಅಧಿಕಾರಿ ಸುಮಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-44-227819134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.