ಚಿತ್ರದುರ್ಗ: ‘ಮಾಹಿತಿಯ ಕೊರತೆಯಿಂದಾಗಿ ಸರ್ಕಾರದ ಸೌಲಭ್ಯಗಳು ಬುಡಕಟ್ಟು, ಪರಿಶಿಷ್ಟ ಪಂಗಡದ ಜನರಿಗೆ ತಲುಪದೇ ಇರಬಾರದು. ಪ್ರತಿ ಇಲಾಖೆಯೂ ಜವಾಬ್ದಾರಿಯಿಂದ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿವೆ. ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಲು ಶ್ರಮಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಮೇ 25ರವರೆಗೆ ಅಭಿಯಾನ ನಡೆಯಲಿದೆ. ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸಲಾಗುತ್ತದೆ. ಜೊತೆಗೆ ಅಗತ್ಯ ದಾಖಲೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಈ ಅಭಿಯಾನ ಆಯೋಜಿಸಲಾಗಿದೆ’ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್. ದಿವಾಕರ್ ತಿಳಿಸಿದರು.

ಜಿಲ್ಲಾ ಆಯಷ್ ಅಧಿಕಾರಿ ಡಾ. ಚಂದ್ರಕಾಂತ್ ನಾಗಸಮುದ್ರ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ತಿಪ್ಪೇಸ್ವಾಮಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ. ಪ್ರವೀಣ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ಗಿರೀಶ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶಿವರಾಜ್, ನಾಸೀರುದ್ದೀನ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ದಿನೇಶ್, ಚನ್ನಬಸಪ್ಪ, ಗೋಪಾಲಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-44-586061236

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.