ಚಿತ್ರದುರ್ಗ: ‘ದುಶ್ಚಟಗಳಿಂದ ದೂರವಾಗುವ ಮೂಲಕ ಜೀವನ ಶೈಲಿ ಬದಲಾವಣೆ ಮಾಡಿಕೊಂಡು ಸದೃಢ, ಆರೋಗ್ಯವಂತ ಸಮಾಜ ನಿರ್ಮಾಣದತ್ತ ದಾಪುಗಾಲು ಹಾಕಬೇಕು’ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಈಚೆಗೆ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಬೇಕು. ಈ ಹವ್ಯಾಸ ಆರೋಗ್ಯವನ್ನು ಬದಲಾಯಿಸುತ್ತದೆ’ ಎಂದರು.

‘ರೋಗಗಳು ದೇವರ ಕಾಟ, ಪಾಪ ಪುಣ್ಯದ ಫಲವಲ್ಲ. ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ ರೋಗಗಳು ಸುಳಿಯದಂತೆ ತಡೆಯಬಹುದು’ ಎಂದು ತಿಳಿಸಿದರು.

‘ತಂತ್ರಜ್ಞಾನದ ಬೆಳವಣಿಗೆಗಳು ಜನರ ಜೀವಿತಾವಧಿ ಹೆಚ್ಚಿಸುತ್ತಿವೆ. ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲೋಣ, ರೋಗ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸೋಣ’ ಎಂದರು.

‘ಆರೋಗ್ಯವೇ ಮಹಾಭಾಗ್ಯ, ಆರೋಗ್ಯ ಹೊಂದಿದ್ದರೆ ಏನೆಲ್ಲಾ ಸಾಧಿಸಬಹುದು. ಆರೋಗ್ಯ ಇಲಾಖೆ ಅಧಿಕಾರಿಗಳು ಮಾರ್ಗದರ್ಶನ ನೀಡಿದಂತೆ ನಾವೆಲ್ಲಾ ನಡೆದು ಆರೋಗ್ಯವಂತ ದೇಶ ನಿರ್ಮಾಣ ಮಾಡಲು ಪ್ರಯತ್ನಿಸೋಣ’ ಎಂದು ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲರಾದ ಪ್ರೊ.ತಾರಿಣಿ ಶುಭದಾಯಿನಿ ತಿಳಿಸಿದರು.

ಭಾರತೀಯ ರೆಡ್ಕ್ರಾಸ್ ಸಂಸ್ಥೆ ಸಂಚಾಲಕ ಪ್ರದೀಪ್ ಕುಮಾರ್, ಎನ್ಎಸ್ಎಸ್ ಘಟಕದ ಅಧಿಕಾರಿ ಬಸವರಾಜ್, ಉಪನ್ಯಾಸಕಿ ಸೌಮ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-44-1579954699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.