ಚಿತ್ರದುರ್ಗ: ‘ಜಿಲ್ಲಾ ಕೇಂದ್ರದಲ್ಲಿ ಮೇ 10ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ ನಡೆಯಲಿದೆ’ ಎಂದು ಹೇಳಿದರು.

‘ಸಮಾಜದ ವತಿಯಿಂದ ಮೇ 25ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಮಾಜದ ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೂ ಅಗತ್ಯ ಸಹಕಾರ ನೀಡಬೇಕು’ ಎಂದು ಸಮಾಜದ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದಸ್ವಾಮಿ, ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಪಾಲಾಕ್ಷಯ್ಯ, ನಗರಸಭೆ ಮಾಜಿ ಅಧ್ಯಕ್ಷೆ ಸುನೀತಾ ಮಲ್ಲಿಕಾರ್ಜುನ್, ಮುಖಂಡರಾದ ಮಲ್ಲಿಕಾರ್ಜುನ, ನಾಗಭೂಷಣ, ಶಶಿಧರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-44-1573303403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.