ಹಿರಿಯೂರು: ತಾಲ್ಲೂಕಿನ ಗುಡಿಹಳ್ಳಿ ಗ್ರಾಮದ ಜಮೀನಿನಲ್ಲಿ ಮನೆ ನಿರ್ಮಿಸಲು ತೆಗೆದಿದ್ದ ಅಡಿಪಾಯಕ್ಕೆ ನೀರು ಹಾಯಿಸುವಾಗ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಚಿತ್ರದುರ್ಗದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಉಪನ್ಯಾಸಕರೊಬ್ಬರು ಸಾವಿಗೀಡಾಗಿದ್ದಾರೆ.

ಕೆ. ರಾಮಚಂದ್ರಪ್ಪ (52) ಮೃತಪಟ್ಟವರು. ತಾಲ್ಲೂಕಿನ ಬೀರೇನಹಳ್ಳಿ ಮಜರೆ ಶಿವಪುರ ಗ್ರಾಮದವರಾದ ಇವರು ಭಾನುವಾರ ಸಂಜೆ ಅಡಿಪಾಯಕ್ಕೆ ನೀರು ಹಾಯಿಸಲು ಮೋಟರ್ ಚಾಲೂ ಮಾಡಿದಾಗ ಅಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-44-1774382032

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.