ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಅಣೆಕಟ್ಟೆಯಿಂದ ಚಳ್ಳಕೆರೆಗೆ ಸಂಪರ್ಕ ಕಲ್ಪಿಸಿರುವ ಪೈಪ್ಲೈನ್ ಮೂಲಕ ತಮಗೂ ಕುಡಿಯುವ ನೀರು ಕೊಡುವಂತೆ ಒತ್ತಾಯಿಸಿ ಗುಳಗೊಂಡನಹಳ್ಳಿ ಗ್ರಾಮಸ್ಥರು ಹರ್ತಿಕೋಟೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಗ್ರಾಮದಲ್ಲಿ 140ಕ್ಕೂ ಹೆಚ್ಚು ಮನೆಗಳಿದ್ದು, 850 ಜನಸಂಖ್ಯೆ ಇದೆ. ಗ್ರಾಮ ಪಂಚಾಯಿತಿಯವರು ಕೊರೆಸಿದ್ದ ಎರಡೂ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗಿದೆ. ಮಳೆ ಬರುವುದು ತಡವಾದರೆ ನೀರಿಗಾಗಿ ಹಾಹಾಕಾರ ಉಂಟಾಗುತ್ತದೆ’ ಎಂದು ಗ್ರಾಮದ ಚೇತನ್ ಆತಂಕ ವ್ಯಕ್ತಪಡಿಸಿದರು.

‘ವಾಣಿವಿಲಾಸ ಅಣೆಕಟ್ಟೆಯಿಂದ ನಮ್ಮೂರಿಗೆ ಕೊಳವೆ ಮಾರ್ಗ ನಿರ್ಮಿಸಿದ್ದು, ನೀರು ಹರಿಸುವುದು ಬಾಕಿ ಇದೆ. ಕೊಳವೆ ಮಾರ್ಗದ ಮೂಲಕ ನೀರು ಕೊಟ್ಟರೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುತ್ತದೆ’ ಎಂದು ತಿಳಿಸಿದರು.

‘ಗುಳಗೊಂಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇಲ್ಲ. ಒಂದು ಕೊಳವೆ ಬಾವಿಯನ್ನು ರೀಬೋರ್ ಮಾಡಿಸಿ ನೀರು ಕೊಡುತ್ತಿದ್ದೇವೆ. ವಾಣಿವಿಲಾಸ ಅಣೆಕಟ್ಟೆಯ ನೀರು ಬೇಕೆಂಬುದು ಗ್ರಾಮಸ್ಥರ ಬೇಡಿಕೆ. ನಾಳೆಯೇ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಂಜಿನಿಯರ್ ಅವರನ್ನು ಭೇಟಿ ಮಾಡಿ, ಗ್ರಾಮಸ್ಥರ ಸಮಸ್ಯೆಯ ಪರಿಹಾರಕ್ಕೆ ಮನವಿ ಮಾಡುತ್ತೇನೆ. ಐಮಂಗಲ ಹೋಬಳಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾಯೋಗಿಕ ಹಂತದಲ್ಲಿದ್ದು, ಅದು ಜಾರಿಯಾದರೆ ಇಡೀ ಹೋಬಳಿಯಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆ ಆಗುವುದಿಲ್ಲ’ ಎಂದು ಪಿಡಿಒ ರತ್ನಮಾಲ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಆರ್. ಗುರುಸ್ವಾಮಿ, ಟಿ. ರಂಗನಾಥ್, ಕಾಂತರಾಜು, ಚಿತ್ತಣ್ಣ, ಜಿ.ಟಿ. ರಂಗನಾಥ, ಟಿ. ರಂಗನಾಥ, ಶಶಾಂಕ್, ಆರ್. ತಿಮ್ಮಣ್ಣ, ರಾಕೇಶ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-44-693630684

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.