ಹಿರಿಯೂರು: ತಾಲ್ಲೂಕಿನ ಕಲ್ಲುವಳ್ಳಿ ಭಾಗದ ಹತ್ತಾರು ಹಳ್ಳಿಗಳ ಜನರ ಬಹುವರ್ಷಗಳ ಬೇಡಿಕೆಯನ್ನು ಗುರುವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಓಡಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಈಡೇರಿಸಿದ್ದಾರೆ.

ತಾಲ್ಲೂಕಿನ ದಿಂಡಾವರ, ದುಗ್ಗಾಣಿಹಟ್ಟಿ, ವೀರವ್ವ ನಾಗತಿಹಳ್ಳಿ, ಚಿಗಳಿಕಟ್ಟೆ, ಯಲ್ಲದಕೆರೆ ಗ್ರಾಮಗಳ ಜನರಿಗೆ, ವಿದ್ಯಾರ್ಥಿಗಳಿಗೆ ಬಸ್ ಓಡಾಟದಿಂದ ಅನುಕೂಲವಾಗಲಿದೆ. ಹಿಂದೆಯೂ ಈ ಮಾರ್ಗದಲ್ಲಿ ರಸ್ತೆ ಸಾರಿಗೆ ಸಂಸ್ಥೆ ಬಸ್ ಓಡಿಸಲಾಗುತ್ತಿತ್ತು. ಏನಾಯಿತೋ ತಿಳಿಯದು ಇದ್ದಕ್ಕಿದ್ದಂತೆ ಓಡಾಟ ಸ್ಥಗಿತಗೊಂಡಿತ್ತು. ಈ ಬಾರಿ ಗ್ರಾಮೀಣ ಭಾಗದ ಜನರಿಗೆ ತೊಂದರೆ ಆಗದ ರೀತಿಯಲ್ಲಿ ನಿರಂತರವಾಗಿ ಬಸ್ ಓಡಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸಚಿವ ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು ಈ ಮಾರ್ಗದಲ್ಲಿ ಬಸ್ ಓಡಿಸುವಂತೆ ಸಾರಿಗೆ ನಿಗಮದ ಚಿತ್ರದುರ್ಗದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಅವರಿಗೆ ಸೂಚಿಸಿದ್ದರು. ಸಚಿವರ ಸೂಚನೆಯಂತೆ ನಿತ್ಯ ಬೆಳಿಗ್ಗೆ 8 ಗಂಟೆಗೆ ಹಿರಿಯೂರು ಬಸ್ ನಿಲ್ದಾಣದಿಂದ ಹೊರಟು ಪಟ್ರೆಹಳ್ಳಿ, ದಿಂಡಾವರ, ದುಗ್ಗಾಣಿಹಟ್ಟಿ, ವೀರವ್ವನಾಗತಿಹಳ್ಳಿ, ಚಿಗಳಿಕಟ್ಟೆ ಮಾರ್ಗವಾಗಿ ಯಲ್ಲದಕೆರೆಗೆ ಹೋಗಿ ಮರಳಿ ಅದೇ ಮಾರ್ಗದಲ್ಲಿ ಹಿಂದಿರುಗುತ್ತದೆ. ಗ್ರಾಮಕ್ಕೆ ಬಸ್ಸು ಬಂದಿದ್ದನ್ನು ಕಂಡ ವೀರವ್ವನಾಗತಿಹಳ್ಳಿ ಗ್ರಾಮಸ್ಥರು ಬಸ್ಸಿಗೆ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-1950580917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.