ಹೊಸದುರ್ಗ: ತಾಲ್ಲೂಕಿನ ಮತ್ತೋಡಿನ ಶಕ್ತಿದೇವತೆ ಕಾಶಿ ಭಾಗೀರಥಿ ದೇವಿಯ ರಥೋತ್ಸವ ಮಂಗಳವಾರ ನಸುಕಿನಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಮಾರ್ಚ್ 26ರಂದು ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಮಂಗಳವಾರ ನಸುಕಿನಲ್ಲಿ ದೇವಿಯ ರಥವೇರಿತು. ದಕ್ಷಬ್ರಹ್ಮಸ್ವಾಮಿ ರಥೋತ್ಸವಕ್ಕೆ ಚಾಲನೆ ನೀಡಿದ ನಂತರ ರಥ ಎಳೆಯಲಾಯಿತು. ಸಕಲ ವಾದ್ಯಗೋಷ್ಠಿಗಳು ಹಾಗೂ ಭಕ್ತರ ಜಯಘೋಷಗಳ ನಡುವೆ ತೇರು ಮತ್ತೋಡಿನ ಬಸ್ ನಿಲ್ದಾಣದ ರಸ್ತೆಯವರೆಗೂ ಸಾಗಿತು.

ಭಕ್ತರು ಬಾಳೆಹಣ್ಣು ಸಮರ್ಪಿಸಿ, ಪ್ರಾರ್ಥಿಸಿದರು. ಮಧ್ಯಾಹ್ನ ಹಾಲು ಪಲ್ಲಕ್ಕಿ ಉತ್ಸವ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಮತ್ತೊಂದೆಡೆ ದಕ್ಷ ವಿನಾಯಕ ಗೆಳೆಯರ ಬಳಗದ ವತಿಯಿಂದ ಮಜ್ಜಿಗೆ, ಪಾನಕ ವಿತರಿಸಲಾಯಿತು.

ಬುಧವಾರ ಹೋಕುಳಿ ಹಾಗೂ ಕಂಕಣ ವಿಸರ್ಜನೆ ಮೂಲಕ ರಥೋತ್ಸವ ಕಾರ್ಯಕ್ರಮಗಳಿಗೆ ತೆರೆ ಬೀಳಲಿದೆ. ಗುಡಿ ಗೌಡರು, ದೇವಾಲಯದ ಆಡಳಿತ ಮಂಡಳಿ, ಸುತ್ತಮುತ್ತಲಿನ 7 ಹಳ್ಳಿ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ದೇವಿಯ ದರ್ಶನ ಪಡೆದರು.

ಮತ್ತೋಡಿನ ಸರ್ಕಾರಿ ಆಸ್ಪತ್ರೆ ಮುಂಭಾಗದಿಂದ ಅರೇಹಳ್ಳಿ ಗೇಟ್ವರೆಗೂ ದೀಪಾಲಂಕಾರ ಮಾಡಲಾಗಿತ್ತು. ಗ್ರಾಮದ ಆಂಜನೇಯ, ಶಿವ, ದುರ್ಗಾದೇವಿ ದೇವಾಲಯಗಳಿಗೂ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಿದ್ದು, ಗ್ರಾಮದ ತುಂಬೆಲ್ಲಾ ಹಬ್ಬದ ವಾತಾವರಣ ಮನೆ ಮಾಡಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-44-1294494438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.