ಚಿತ್ರದುರ್ಗ: ‘ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಲ್ಲಿ ಬಡವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಚಿಕಿತ್ಸೆ ನೀಡುವ ವಿಚಾರದಲ್ಲಿ ಯಾವುದೇ ಲೋಪ ಕಂಡು ಬಂದರೇ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮ ಜರುಗಿಸಲಾಗುತ್ತದೆ’ ಎಂದು ಶಾಸಕ ಕೆ.ಸಿ. ವೀರೇಂದ್ರ ಎಚ್ಚರಿಸಿದರು.

ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ವಾರ್ಡ್, ಸೌಲಭ್ಯಗಳನ್ನು ಪರಿಶೀಲಿಸಿ ಮಾತನಾಡಿದರು.

‘ಆಸ್ಪತ್ರೆಗೆ ವಿವಿಧ ತಾಲ್ಲೂಕುಗಳಿಂದ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆಯಲು ಬರುತ್ತಿದ್ದಾರೆ. ಅವರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವುದು ಆಸ್ಪತ್ರೆಯ ಸಿಬ್ಬಂದಿಯ ಕರ್ತವ್ಯ. ಸಣ್ಣ ನಿರ್ಲಕ್ಷ್ಯ ಕಂಡು ಬಂದರೂ ಯಾವುದೇ ಕಾರಣ ಕೇಳದೆ ಕ್ರಮ ಜರುಗಿಸಲಾಗುತ್ತದೆ. ಅದಕ್ಕೆ ಅವಕಾಶ ಕೊಡದಂತೆ ಕರ್ತವ್ಯ ನಿರ್ವಹಿಸಿ’ ಎಂದು ಸೂಚಿಸಿದರು.

ಔಷಧಿ ಕೇಂದ್ರ, ಐಸಿಯು ಹಾಗೂ ಡಯಾಲಿಸಿಸ್ ಕೇಂದ್ರಗಳ ಭೇಟಿ ನೀಡಿ ಅಲ್ಲಿನ ರೋಗಿಗಳ ಆರೋಗ್ಯ ವಿಚಾರಿಸಿದರು. ತಾಲ್ಲೂಕಿನಿಂದ ಬಂದಂತಹ ರೋಗಿಗಳಿಗೆ ಉತ್ತಮ ಚಿಕಿತ್ಸೆ ಕೊಡಬೇಕು. ಸಾಧ್ಯವಾದಷ್ಟು ರೋಗಿಗಳನ್ನು ಬೇರೆ ಕಡೆಗೆ ಕಳುಹಿಸದಂತೆ ಚಿಕಿತ್ಸೆ ನೀಡಲು ಕ್ರಮವಹಿಸಬೇಕು ಎಂದರು.

ವೈದ್ಯಕೀಯ ಕಾಲೇಜು ಕಾಮಗಾರಿ ವೀಕ್ಷಿಸಿದ ಶಾಸಕರು, ‘ಆಸ್ಪತ್ರೆ ಕಟ್ಟಡದ ನಿರ್ಮಾಣದಲ್ಲಿ ಲೋಪವಾಗದಂತೆ ಗುತ್ತಿಗೆದಾರರು ಎಚ್ಚರವಹಿಸಬೇಕು. ವೈದ್ಯಾಧಿಕಾರಿಗಳು ಕಾಮಗಾರಿ ವೀಕ್ಷಣೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ರವೀಂದ್ರ, ಡೀನ್ ಯುವರಾಜ್, ಡಾ. ಮೇಘಾ, ಎಂಜಿನಿಯರ್ ಗಣೇಶ್, ಉಮೇಶ್, ಕಟ್ಟಡದ ವ್ಯವಸ್ಥಾಪಕ ಸುದೀರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-44-1859876176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.