ಚಿತ್ರದುರ್ಗ: ‘ಗಣಿಗಾರಿಕೆ ಪ್ರಭಾವಿತ ವಲಯಗಳಲ್ಲಿ ಅನುಷ್ಠಾನಗೊಳ್ಳಲಿರುವ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡುವುದು ಕಡ್ಡಾಯ. ಲೋಪ, ಅಕ್ರಮ ಕಂಡು ಬಂದರೆ ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಲಾಗುತ್ತದೆ’ ಎಂದು ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಎಸ್. ಬಿಜ್ಜೂರ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್ಸಿ)ದ ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆಯಡಿ ಕೈಗೊಳ್ಳಲಿರುವ ಕಾಮಗಾರಿ, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ವಸತಿ ಯೋಜನೆಗಳಲ್ಲಿ ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೇ, ನೈಜ ಹಾಗೂ ಅರ್ಹ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಬೇಕು. ನೈಜ ಪರಿಸ್ಥಿತಿಯನ್ನು ಪರಿಶೀಲಿಸಿ, ಯಾರು ನಿಜವಾಗಿಯೂ ಮನೆಗೆ ಅರ್ಹರಿದ್ದಾರೋ ಅವರಿಗೆ ಮಾತ್ರ ಯೋಜನೆಯ ಲಾಭ ಸಿಗುವಂತೆ ನೋಡಿಕೊಳ್ಳಬೇಕು. ಈ ಕುರಿತು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಸೂಚನೆ ನೀಡಿದರು.

‘ವಸತಿ ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ನಿವೇಶನ ರಹಿತರು ಮತ್ತು ವಸತಿ ರಹಿತರ ವರ್ಗೀಕರಣ ಮಾಡಬೇಕು. ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕಾಗಿ ಗ್ರಾಮದಿಂದ ಗರಿಷ್ಠ 2 ಕಿ.ಮೀ ವ್ಯಾಪ್ತಿಯೊಳಗೆ ಸೂಕ್ತವಾದ ಭೂಮಿಯನ್ನು ಗುರುತಿಸುವ ಪ್ರಕ್ರಿಯೆ ಚುರುಕುಗೊಳಿಸಬೇಕು’ ಎಂದರು.

‘ಭೂಮಿ ಗುರುತಿಸಿದ ನಂತರ ಆ ನಿವೇಶನಗಳನ್ನು ಲೇಔಟ್ ಅನುಮೋದನೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರಸ್ತಾವನೆ ಸಲ್ಲಿಸಬೇಕು. ಹೊಸದಾಗಿ ನಿರ್ಮಿಸುವ ಲೇಔಟ್ಗಳಲ್ಲಿ ರಸ್ತೆ, ಕುಡಿಯುವ ನೀರಿನ ಸೌಲಭ್ಯ, ಬೀದಿ ದೀಪಗಳು ಹಾಗೂ ವಿದ್ಯುದ್ವೀಕರಣದಂತಹ ಎಲ್ಲಾ ರೀತಿಯ ಮೂಲ ಸೌಕರ್ಯ ಕಲ್ಪಿಸಬೇಕು’ ಎಂದು ತಿಳಿಸಿದರು.

‘ಯೋಜನಾ ನಕ್ಷೆಯಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಅಗತ್ಯವಿರುವ ಜಾಗವನ್ನು ಕಾಯ್ದಿರಿಸಿ, ಸಂಬಂಧಪಟ್ಟ ಇಲಾಖೆಗಳಿಂದ ಮಂಜೂರಾತಿ ಪಡೆದುಕೊಳ್ಳಬೇಕು. ಹೊಸ ಕಾಲೊನಿಯ ಮುಖ್ಯ ಗ್ರಾಮದಿಂದ ಉತ್ತಮ ಸಂಪರ್ಕ ರಸ್ತೆಯನ್ನು ಕಲ್ಪಿಸುವ ಬಗ್ಗೆ ವಿಶೇಷ ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ಲೇಔಟ್ಗಳನ್ನು ಸ್ಮಶಾನಗಳ ಪಕ್ಕದಲ್ಲಿ ನಿರ್ಮಿಸಬಾರದು. ಅಂತಹ ಸ್ಥಳಗಳಲ್ಲಿ ಜನ ವಾಸಿಸಲು ಹಿಂಜರಿಯುವುದರಿಂದ ಸೂಕ್ತವಾದ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಗಣಿಗಾರಿಕೆ ಪ್ರಭಾವಿತ ಪ್ರದೇಶಗಳಲ್ಲಿ ಆರೋಗ್ಯ ಸುಧಾರಣೆಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕ್ಷಯರೋಗ ಪೀಡಿತರಿಗೆ ಪೌಷ್ಟಿಕ ಆಹಾರ ವಿತರಣೆ, ನವಜಾತ ಶಿಶುಗಳ ಆರೈಕೆಗೆ ಕ್ರಮವಹಿಸಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಸಾಕಷ್ಟು ಮಟ್ಟಕ್ಕೆ ಕುಸಿದೆ. ಇದು ಹೀಗೆಯೇ ಮುಂದುವರಿದರೆ ಅಂತರ್ಜಲ ಕ್ಷಾಮ ಒದಗಿಬರಬಹುದು. ಇದು ಜಿಲ್ಲೆಯ ಜನಜೀವನ, ಕೃಷಿ ಹಾಗೂ ತೋಟಗರಿಕೆಯ ಮೇಲೆ ಸಾಕಷ್ಟು ಪ್ರಭಾವ ಬೀರುತ್ತದೆ. ಆದ್ದರಿಂದ ಅಗತ್ಯವಾಗಿ ಜಲ ಮರುಪೂರಣ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಆಕಾಶ್ ತಿಳಿಸಿದರು.

‘ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಜಲ ಮರುಪೂರಣ ವ್ಯವಸ್ಥೆ ಅಳವಡಿಕೆಗೆ ಚಿಂತಿಸಲಾಗುತ್ತಿದೆ. ಶಾಲೆಗಳಲ್ಲಿ ಸೋಲಾರ್ ಪ್ಯಾನಲ್ಗಳನ್ನು ಅಳವಡಿಸಿ, ವಿದ್ಯುತ್ ಉತ್ಪಾದನೆ ಮಾಡುವ ಮೂಲಕ, ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡಬಹುದು’ ಎಂದರು.

‘ಜಿಲ್ಲೆಯ ಸಾಕಷ್ಟು ಅಂಗನವಾಡಿ ಕೇಂದ್ರಗಳಲ್ಲಿ ಪದವಿ ಹಾಗೂ ಪಿ.ಯು. ನಂತರ ವಿದ್ಯಾಭ್ಯಾಸ ಪಡೆದವರು ಸಾಕಷ್ಟು ಕಾರ್ಯಕರ್ತೆಯರು ಇದ್ದಾರೆ. ಇವರಿಗೆ ತರಬೇತಿ ನೀಡಿ, ಅಂಗನವಾಡಿ ಮಕ್ಕಳಿಗೆ ಶಾಲೆ ಪೂರ್ವ ವಿದ್ಯಾಭ್ಯಾಸವನ್ನು ನೀಡಬಹುದು. ಇದರಿಂದ ಮಕ್ಕಳ ಕಲಿಕೆ ಮಟ್ಟ ಉತ್ತಮಗೊಳ್ಳಲಿದೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್. ಗಾಯತ್ರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯನಾಯ್ಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಎಂ.ಜೆ. ಮಹೇಶ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹನುಮಂತಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಜಿ.ಪಿ. ರೇಣುಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-44-1420369033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.