ಚಿತ್ರದುರ್ಗ: ‘ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಜಿಲ್ಲೆಯಲ್ಲಿ 18,267 ಹೆಣ್ಣು ಮಕ್ಕಳಿಗೆ ಎಚ್ಪಿವಿ ಲಸಿಕೆ ಹಾಕುವ ಗುರಿಯಿದ್ದು ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಎಚ್ಪಿವಿ ಲಸಿಕಾ ಕಾರ್ಯಕ್ರಮದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.

‘ಲಸಿಕೆ ನೀಡುವ ಮುನ್ನ ಶಾಲಾ ಹಂತದಲ್ಲಿ ಪೋಷಕರು ಮತ್ತು ಶಿಕ್ಷಕರ ಸಭೆ ನಡೆಸಿ ಲಸಿಕೆಯ ಮಹತ್ವ ಹಾಗೂ ಅಗತ್ಯತೆ ಕುರಿತು ಅರಿವು ಮೂಡಿಸಬೇಕು. ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು’ ಎಂದರು.

‘ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆ ಪಡೆಯಲು ₹9,000ದಿಂದ ₹15,000 ವೆಚ್ಚವಾಗುತ್ತದೆ. ಸರ್ಕಾರವು ಉಚಿತವಾಗಿ ನೀಡುತ್ತಿರುವಾಗ, ಅರ್ಹ ವಯಸ್ಸಿನ ಹೆಣ್ಣು ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಲಸಿಕೆ ಕುರಿತು ತಪ್ಪು ಮಾಹಿತಿ ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಿ.ಎಂ.ಅಭಿನವ ಮಾತನಾಡಿ, ‘ಮಹಿಳೆಯರನ್ನು ಕಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯಂತೆ 14 ವರ್ಷ ಪೂರೈಸಿದ ಮತ್ತು 15 ವರ್ಷದೊಳಗಿನ ಹೆಣ್ಣು ಮಕ್ಕಳನ್ನು ಎಚ್ಪಿವಿ ಲಸಿಕಾ ಅಭಿಯಾನದ ಫಲಾನುಭವಿಗಳೆಂದು ಗುರುತಿಸಲಾಗಿದೆ. ಅಭಿಯಾನದಲ್ಲಿ ‘ಗಾರ್ಡಸಿಲ್ 4’ ಲಸಿಕೆ ಬಳಸಲಾಗುತ್ತಿದ್ದು, ಇದು ಎಚ್ಪಿವಿ ವೈರಸ್ನ 6, 11, 16 ಮತ್ತು 18 ಎಂಬ ನಾಲ್ಕು ರೂಪಾಂತರಗಳ ವಿರುದ್ಧ ರಕ್ಷಣೆ ನೀಡುತ್ತದೆ’ ಎಂದರು.

‘ಜಿಲ್ಲೆಯ 347 ಉಪ ಕೇಂದ್ರಗಳು, 86 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 11 ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆ ಲಭ್ಯವಿರುತ್ತದೆ. ಅಭಿಯಾನ ಆರಂಭವಾಗಿದ್ದು, ಮುಂದಿನ ಮೂರು ತಿಂಗಳು ನಡೆಯಲಿದೆ’ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಜಯಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-44-1217925588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.