ಚಿತ್ರದುರ್ಗ ಬಿಟ್ಟು ಬೆಂಗಳೂರಿನಲ್ಲಿ ಸಂದರ್ಶನ ನಡೆಸಿರುವುದೇ ಅನುಮಾನಾಸ್ಪದ. ದೂರುಗಳ ಗಾಂಭೀರ್ಯ ಗಮನಿಸಿದರೆ ನೇಮಕಾತಿ ಪ್ರಕ್ರಿಯೆ ಬಗ್ಗೆ ಸಮಗ್ರ ತನಿಖೆಯ ಅವಶ್ಯಕತೆ ಇದೆ
ಆದಿತ್ಯ ಆಮ್ಲಾನ್ ಬಿಸ್ವಾಸ್ ಪ್ರಾದೇಶಿಕ ಆಯುಕ್ತ ಬೆಂಗಳೂರು
ನಿಯಮ ಉಲ್ಲಂಘಿಸಿ ಆಯ್ಕೆ ಪ್ರಕ್ರಿಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದತಿ ಬಗ್ಗೆ ಮುಂದಿನ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗುವುದು
ಟಿ.ವೆಂಕಟೇಶ್ ಜಿಲ್ಲಾಧಿಕಾರಿ ಚಿತ್ರದುರ್ಗ
ಆರ್.ಸಿ ಡಿ.ಸಿ ನೋಟಿಸ್‌ಗೆ ಉತ್ತರ ನೀಡಿದ್ದೇನೆ. ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಕಾರಣ ಮುಂದಿನ ಆದೇಶಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ
ಡಾ.ಯುವರಾಜ್ ನಿರ್ದೇಶಕ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ