ಚಿತ್ರದುರ್ಗ: ‘ವಿಚ್ಛೇದನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ವಿಚ್ಛೇದನ ಪ್ರಕರಣಗಳೊಂದಿಗೆ ಜೀವನಾಂಶ ಕೋರಿಕೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಪ್ರಕರಣಗಳು ತಳುಕು ಹಾಕಿಕೊಂಡಿರುತ್ತವೆ. ಜಿಲ್ಲೆಯಲ್ಲಿ 838 ವಿಚ್ಛೇದನ ಪ್ರಕರಣ ಹಾಗೂ 668 ಜೀವನಾಂಶ ಕೋರಿಕೆ ಪ್ರಕರಣಗಳು ಬಾಕಿ ಇವೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಹೇಳಿದರು.

‘ಲೋಕ ಅದಾಲತ್ನಲ್ಲಿ ವೈವಾಹಿಕ ಪ್ರಕರಣಗಳನ್ನು ಸುಖಾಂತ್ಯಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಕಳೆದ ಬಾರಿ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ 14 ಜೋಡಿಗಳನ್ನು ಪುನಃ ಒಂದು ಮಾಡಲಾಗಿದೆ. ವಿಚ್ಛೇದನ ಪ್ರಕರಣದಲ್ಲಿ ಸತಿ– ಪತಿಯನ್ನು ಒಂದು ಮಾಡುವ ಮೂಲಕ ಪ್ರಕರಣ ವಿಲೇವಾರಿ ಮಾಡಲು ಆದ್ಯತೆ ನೀಡಲಾಗಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಕಳೆದ ಲೋಕ ಅದಾಲತ್ನಲ್ಲಿ ಚಾಲ್ತಿಯಲ್ಲಿದ್ದ 4,575 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಈ ಮೂಲಕ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ ಶೇ 10ರಷ್ಟು ಹೊರೆ ಕಡಿಮೆಯಾಗಿದೆ. ಇದರೊಂದಿಗೆ 1,06,249 ವ್ಯಾಜ್ಯಪೂರ್ವ ಪ್ರಕರಣಗಳು ಸಹ ವಿಲೇವಾರಿಯಾಗಿವೆ’ ಎಂದರು.

‘2025ರ ಜೂನ್ 1ರವರೆಗೆ ಜಿಲ್ಲೆಯಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ವ್ಯಾಜ್ಯ ಪ್ರಕರಣ ಸೇರಿ ಒಟ್ಟು 46,515 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಜುಲೈ 12ರಂದು ನಡೆಯಲಿರುವ ಮೆಗಾ ಲೋಕ್ ಅದಾಲತ್ನಲ್ಲಿ 4–5 ಸಾವಿರ ಪ್ರಕರಣಗಳನ್ನು ವಿಲೇ ಮಾಡಲು ಗುರಿ ಹೊಂದಲಾಗಿದೆ. ಈಗಾಗಲೇ 2,588 ಪ್ರಕರಣಗಳನ್ನು ವಿಲೇವಾರಿಗೆ ಗುರುತಿಸಲಾಗಿದೆ’ ಎಂದರು.

‘ಜನಸಂಖ್ಯೆಗೆ ಅನುಗುಣವಾಗಿ ನ್ಯಾಯಾಲಯಗಳ ಸಂಖ್ಯೆ ಇಲ್ಲದಿರುವುದರಿಂದ ನ್ಯಾಯಾಧೀಶರು ಹೆಚ್ಚುವರಿ ಕಾರ್ಯಭಾರ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ 293 ಕ್ರಿಮಿನಲ್ ಕಾಂಪೌಡಬಲ್, 4,848 ಚೆಕ್ ಅಮಾನ್ಯ, 838 ವಿವಾಹ ವಿಚ್ಛೇದನ, 348 ವರದಕ್ಷಿಣೆ, 668 ಜೀವನಾಂಶ, 4,046 ಆಸ್ತಿ ವಿಭಾಗ, 1,596 ಬ್ಯಾಂಕ್, 758 ಹಣ ವಸೂಲಾತಿ, 2,686 ವಾಹನ ಅಪಘಾತ, 118 ನೌಕರರ ಪರಿಹಾರ, 12 ಕಾರ್ಮಿಕ, 6 ವಿದ್ಯುತ್ ಕಾಯ್ದೆ, 138 ಗಣಿ ಮತ್ತು ಖನಿಜ, 1,476 ಭೂಸ್ವಾಧೀನ ಪ್ರಕರಣಗಳು ಬಾಕಿ ಇವೆ’ ಎಂದರು.

‘822 ಪರಿಹಾರ, 835 ಅರಣ್ಯ, 96 ಭೂ ಅಧಿಗ್ರಹಣ, 415 ವಾಹನ ಅಧಿಗ್ರಹಣ 3,496 ಇತರೆ ಅಧಿಗ್ರಹಣ, 9,087 ಇತರೆ ಸಿವಿಲ್ ಪ್ರಕರಣಗಳು, 1,691 ಜನನ ಹಾಗೂ ಮರಣ, 1,405 ಪಿ.ಟಿ ಕೇಸ್, 6,045 ಕ್ರಿಮಿನಲ್, 4,792 ನಾನ್ ಕಾಂಪೌಡಬಲ್ ಪ್ರಕರಣ ಸೇರಿ ಒಟ್ಟು 46,515 ಪ್ರಕರಣಗಳು ಬಾಕಿಯಿವೆ. ಕಕ್ಷಿಗಾರರು ಶೀಘ್ರವೇ ನ್ಯಾಯದಾನ ಸಿಗಬೇಕಾದರೆ ಲೋಕ್ ಅದಾಲತ್ನ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

‘ಜುಲೈ 12ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷಗಾರರು ಕೂಡ ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬೇಕು. ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಲೋಕ ಅದಾಲತ್ನಲ್ಲಿ ಭಾಗವಹಿಸಬಹುದು’ ಎಂದರು.

ಸಾರ್ವಜನಿಕರು ಲೋಕ ಅದಾಲತ್ ಕುರಿತು ಹೆಚ್ಚಿನ ಪ್ರಶ್ನೆ ಮತ್ತು ಮಾಹಿತಿಗಾಗಿ ಬೇಕಾದಲ್ಲಿ ಇ-ಮೇಲ್ dlsachitradurga3@gmail.com ಹಾಗೂ ಸದಸ್ಯ ಕಾರ್ಯದರ್ಶಿಯವರ ಕಚೇರಿ ಮೊ; 9141193935, ದೂರವಾಣಿ ಸಂಖ್ಯೆ 08194- 222322ಕ್ಕೆ ಸಹ ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉಪಸ್ಥಿತರಿದ್ದರು.

ಪೋಕ್ಸೊ ಪ್ರಕರಣಗಳ ಸಂಖ್ಯೆ ಇಳಿಕೆ

‘ಕಾನೂನು ಸೇವಾ ಪ್ರಾಧಿಕಾರದ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲಿ ಪೋಕ್ಸೊ ಕಾಯ್ದೆ ಕುರಿತು ಹೆಚ್ಚಿನ ಜಾಗೃತಿ ಮೂಡಿದೆ. ಪೋಕ್ಸೊ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿಲ್ಲ. ಪ್ರಕರಣಗಳನ್ನು ಮತ್ತಷ್ಟು ಇಳಿಮುಖ ಮಾಡುವುದು ಗುರಿಯಾಗಿದೆ. ಅದಕ್ಕಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ರೋಣ ವಾಸುದೇವ ತಿಳಿಸಿದರು. ‘ನಗರದ ನ್ಯಾಯಾಲಯದ ಆವರಣದಲ್ಲಿ ಹೊಸದಾಗಿ ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸಲಾಗಿದೆ. ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ವಾಹನಗಳ ವಿಲೇವಾರಿಗೂ ಕ್ರಮ ವಹಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.