ಚಿತ್ರದುರ್ಗ: ‘ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ನಿರ್ಮಾಣ ಹಂತದಲ್ಲಿ ಸ್ಥಗಿತಗೊಂಡಿ ರುವ ಡಾ.ಬಾಬು ಜಗಜೀವನ್ ರಾಮ್ ಭವನ ಕಾಮಗಾರಿಯನ್ನು ಪುನರ್ ಆರಂಭಿಸಿ 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಶಾಸಕ ಕೆ.ಸಿ.ವೀರೇಂದ್ರ ಸೂಚನೆ ನೀಡಿದರು.

ಗುರುವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ‘ಕುಂಠಿತವಾಗಿರುವ ಭವನದ ಇತರೆ ಕಾಮಗಾರಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಲಾಗುವುದು. ಭವನದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಬೇಕು. ನಗರದಲ್ಲಿ ಎಲ್ಲ ಸಮುದಾಯದವರಿಗೂ ಪ್ರತ್ಯೇಕವಾದ ಭವನಗಳಿವೆ. ಅದರಂತೆ ದಲಿತ ಸಮುದಾಯದವರಿಗೆ ಅವಶ್ಯಕವಾಗಿ ಬೇಕಾಗಿರುವ ಡಾ.ಬಾಬು ಜಗಜೀವನ ರಾಮ್ ಭವನ ಕಾಮಗಾರಿ ಅರ್ಧದಲ್ಲೇ ಕುಂಠಿತವಾಗಿರುವುದು ಬೇಸರದ ಸಂಗತಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘8 ವರ್ಷಗಳಿಂದ ಪಾಳು ಬಿದ್ದಿರುವ ಭವನದ ಕಾಮಗಾರಿಯನ್ನು ಮತ್ತೆ ಕೈಗೆತ್ತಿಕೊಳ್ಳಬೇಕು. ಭವನದ ಅರ್ಥದಷ್ಟು ಕೆಲಸಗಳು ಮುಗಿದಿವೆ. ಆದರೆ, ಇನ್ನಷ್ಟು ಮುಖ್ಯವಾದ ಕೆಲಸಗಳು ಆಗಬೇಕಿದೆ. ಅವುಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು. ಭವನದ ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾನಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದರು.

‘ಬಾಬು ಜಗಜೀವನ ರಾಮ್ ಸಮುದಾಯ ಭವನ 2018ರಲ್ಲಿ ಕಾಮಗಾರಿ ಪ್ರಾರಂಭವಾಗಿದ್ದು, ₹ 9.90 ಕೋಟಿ ಮೊತ್ತದಲ್ಲಿ ನಿರ್ಮಾಣವಾಗಬೇಕಾಗಿತ್ತು. ಆದರೆ, ಭವನದ ಯೋಜನೆ ಬದಲಾವಣೆಯಾಗಿದ್ದರಿಂದ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸುವುದಕ್ಕೆ ಸಾಧ್ಯವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಗ್ಯಾರಂಟಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಪಪ್ಪೀಸ್ ವಿದ್ಯಾರ್ಥಿ ವಿಂಗ್ ಅಧ್ಯಕ್ಷ ರವಿ, ಕಾರ್ಯದರ್ಶಿ ಸಲೀಂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-44-255110185

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.