ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಬಡವರಿಗೆ ಆಧಾರವಾಗಿದ್ದ ಜನೌಷಧ ಮಳಿಗೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಆದೇಶಿಸಿರುವುದು ಖಂಡನೀಯ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಆಸ್ಪತ್ರೆ, ಜನೌಷಧ ಮಳಿಗೆ ಎದುರು ಪ್ರತಿಭಟನೆ ನಡೆಸಿದರು.

ಸಾಮಾನ್ಯರ ಬಗ್ಗೆ ಕನಿಷ್ಠ ಕಾಳಿಜಿ ಇಲ್ಲದ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಕಡುಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಔಷಧ ಪೂರೈಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ 2008ರಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆ ಜಾರಿಗೊಳಿಸಿತ್ತು. ಇದರನ್ವಯ ಈಗಾಗಲೇ ದೇಶದಾದ್ಯಂತ 16,290 ಜನೌಷಧ ಕೇಂದ್ರ ತೆರೆಯಲಾಗಿದೆ, ಕರ್ನಾಟಕ ರಾಜ್ಯದಲ್ಲಿ1,459 ಕೇಂದ್ರಗಳಿವೆ. ಇದರಲ್ಲಿ ಸುಮಾರು 400ಕ್ಕೂ ಹೆಚ್ಚು ಕೇಂದ್ರಗಳು ಸರ್ಕಾರಿ ಆಸ್ಪತ್ರೆ ಆವರಣದಲ್ಲಿವೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರಗಳನ್ನು ರಾಜ್ಯ ಸರ್ಕಾರ ಮುಚ್ಚಲು ಆದೇಶಿಸಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆವರಣದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ನಿಜವಾಗಿಯೂ ಬಡವರ, ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಈ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತವಾಗಿ ಔಷಧ ಪೂರೈಸುತ್ತೇವೆ ಎಂಬ ಸಮರ್ಥನೆ ನೀಡಿ ಮಳಿಗೆಗಳನ್ನೇ ಮುಚ್ಚಲು ಆದೇಶಿಸಿರುವುದು ಖಂಡನೀಯ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಅವಶ್ಯವಾದ ಔಷಧಗಳ ಪೂರೈಕೆ ಇರುವುದಿಲ್ಲ. ಹೀಗಾಗಿ ಸರ್ಕಾರದ ನಿರ್ಧಾರದಂದ ಬಡವರಿಗೆ ಆರೋಗ್ಯ ಸೇವೆಗಳು ದುಬಾರಿಯಾಗಲಿವೆ ಎಂದರು.

ಜನೌಷಧ ಕೇಂದ್ರ ಮುಚ್ಚುವ ನಿರ್ಧಾರವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು. ಕಳೆದ 10 ವರ್ಷಗಳಲ್ಲಿ ಈ ದೇಶದ ಬಡಜನರಿಗೆ ಅಂದಾಜು ₹ 30,000ರ ಕೋಟಿಯಷ್ಟು ಔಷಧವನ್ನು ಜನೌಷಧ ಮಳಿಗೆಯಿಂದ ನೀಡಲಾಗಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಆದೇಶ ವಾಪಸ್ ಪಡೆಯದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಔಷಧಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಸರ್ಕಾರ ಜನೌಷಧ ಕೇಂದ್ರಗಳನ್ನು ಮುಚ್ಚುವ ಆದೇಶ ಹೊರಡಿಸಿದೆ. ರಾಜಕೀಯ ದುರುದ್ದೇಶದ ಸರ್ಕಾರ ಈ ತೀರ್ಮಾನ ಕೈಗೊಂಡಿದ್ದು ಬಡವರಿಗೆ ಅನ್ಯಾಯ ಮಾಡಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಬಡ ರೋಗಿಗಳಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಆರೋಗ್ಯ ಸೇವೆಗಳು ಸಿಗದಂತಾಗಿದೆ. ಇರುವ ಜನೌಷಧಿ ಕೇಂದ್ರಗಳನ್ನು ಮುಚ್ಚದೆ, ಮತ್ತಷ್ಟು ಕೇಂದ್ರಗಳನ್ನು ತೆರೆಯಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜೆಪಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಚಿ ಮಾಧುರಿ ಗಿರೀಶ್, ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಮಹಿಳಾ ಮೋರ್ಚಾದ ಅಧ್ಯಕ್ಷೆ ಶೈಲಜಾ ರೆಡ್ಡಿ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಮಾಧ್ಯಮ ಸಹ ಸಂಚಾಲಕ ತಿಪ್ಪೇಸ್ವಾಮಿ ಛಲವಾದಿ, ಮುಖಂಡರಾದ ನವೀನ್ ಚಾಲುಕ್ಯ, ಕಾರ್ಯಕರ್ತರಾದ ಬಸಮ್ಮ, ಶಾಂತಮ್ಮ, ಮಂಜುಳಮ್ಮ, ವೀಣಾ ಕಿರಣ್, ಶುಂಭು, ನಾಗರಾಜ್, ಭರತ್ ಇದ್ದರು.

Highlights - ಔಷಧ ಕೇಂದ್ರ ಮುಚ್ಚುವ ನಿರ್ಧಾರ ವಾಪಸ್ ಪಡೆಯಲಿ ಆದೇಶ ಹಿಂದಕ್ಕೆ ಪಡೆಯದಿದ್ದರೆ ಹೋರಾಟ ತೀವ್ರ ಬಡವರಿಗೆ ಆರೋಗ್ಯ ಸೇವೆಗಳು ದುಬಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.