ಚಿಕ್ಕಜಾಜೂರು: ಸಮೀಪದ ಕಲ್ಲವ್ವನಾಗತಿಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಬನಶಂಕರಿ ಅಮ್ಮನ ದೇವಸ್ಥಾನದಲ್ಲಿ ನೂತನ ಶಿಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಏ. 10ರಂದು ನಡೆಯಲಿದೆ.

ಗುರುವಾರ ಬೆಳಿಗ್ಗೆ ಸಾಮೂಹಿಕ ಸಂಕಲ್ಪ, ಗಣಪತಿ ಪೂಜೆ, ಪುಣ್ಯಾಹ, ವಾಚನ, ಕಳಾಕರ್ಷಣೆ ಹೋಮಗಳನ್ನು ನಡೆಸಲಾಯಿತು. ಮಹಿಳೆಯರು ಪೂರ್ಣಕುಂಭಗಳೊಂದಿಗೆ ಗಂಗೆಯನ್ನು ತಂದು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದರು. ಅಲ್ಲದೆ ಗ್ರಾಮ ದೇವರುಗಳ ಮೆರವಣಿಗೆ ನಡೆಸಲಾಯಿತು. ಸಂಜೆ ವಿವಿಧ ಪೂಜೆ ನಡೆದವು.

ಏ. 10ರಂದು ಬೆಳಿಗ್ಗೆ 4ರಿಂದ ವಿವಿಧ ಪೂಜೆಗಳನ್ನು ನಡೆಸಿ, ಅಮ್ಮನವರ ನೂತನ ಶಿಲಾ ಮೂರ್ತಿಯ ಪ್ರತಿಷ್ಠಾಪನೆ ನಡೆಸಲಾಗುವುದು. 8.30ಕ್ಕೆ ಶಿಖರಕ್ಕೆ ಕಳಸಾರೋಹಣ ನಡೆಯಲಿದೆ.

ಏ. 11 ರಂದು ಹಂಪಿ ಹೇಮಕೂಟದ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಹಾಗೂ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಗ್ರಾಮದ ದೇವಾಂಗ ಸಮಾಜದ ಅಧ್ಯಕ್ಷ ಎಸ್.ಡಿ. ರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಬೆಂಗಳೂರು ದೇವಾಂಗ ಸಂಘದ ಅಧ್ಯಕ್ಷ ಜಿ. ರಮೇಶ್, ರಾಜ್ಯಸಭಾ ಸದಸ್ಯರಾದ ಕೆ. ನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಸಂಸದ ಗೋವಿಂದ ಕಾರಜೋಳ, ಶಾಸಕ ಎಂ. ಚಂದ್ರಪ್ಪ, ಮಾಜಿ ಸಚಿವ ಎಚ್. ಆಂಜನೇಯ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಗೋ.ತಿಪ್ಪೇಶ್ ಪಾಲ್ಗೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-1745093110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.