ಹೊಳಲ್ಕೆರೆ: ಕನ್ನಡ ಸಾಹಿತ್ಯ ಪರಿಷತ್ ಹಾಗೂ ದಾವಣೆಗೆರೆಯ ನಾರಾಯಣ ಹೆಲ್ತ್ ಸೂಪರ್ ಸ್ಪಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಸೆ.16 ರಂದು ತಾಲ್ಲೂಕಿನ ತಿರುಮಲಾಪುರ (ಎಮ್ಮೆಹಟ್ಟಿ) ಸರ್ಕಾರಿ ಶಾಲೆಯ ಆವರಣದಲ್ಲಿ ಹೃದಯ ಉಚಿತ ತಪಾಸಣಾ ಶಿಬಿರ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಶಿವಮೂರ್ತಿ ತಿಳಿಸಿದ್ದಾರೆ.