ಚಿತ್ರದುರ್ಗ: ‘ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಬದಲಾವಣೆ ಆಗುವುದಾದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು’ ಎಂದು ದಲಿತ ಛಲವಾದಿ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಬಸವರಾಜ್ ಒತ್ತಾಯಿಸಿದರು.

‘ಮಲ್ಲಿಕಾರ್ಜುನ ಖರ್ಗೆ ಅವರು 60 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಇದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ನಿಷ್ಠ, ಪ್ರಾಮಾಣಿಕತೆಯಿಂದ ಇದ್ದಾರೆ. ಇವರಿಗಿಂತಲೂ ಅನುಭವಿ ರಾಜಕಾರಣಿಯನ್ನು ಕಾಂಗ್ರೆಸ್ನಲ್ಲಿ ಮತ್ತೊಬ್ಬರನ್ನು ಕಾಣಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುವುದಾದರೆ ಸಂತೋಷ ಎಂದು ತಿಳಿಸಿದ್ದಾರೆ. ಈಗ ದಲಿತ ನಾಯಕರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶ ಬಂದಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ ಅವರು ರಾಜ್ಯದಲ್ಲಿ ಎರಡು ಸಲ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ ಅವರ ಪೈಕಿ ಯಾರನ್ನಾದರೂ ಮುಖ್ಯಮಂತ್ರಿಯನ್ನಾಗಿ ಮಾಡಲಿ. ಆದರೆ, ಮಲ್ಲಿಕಾರ್ಜುನ ಖರ್ಗೆರವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟರೆ ಎಲ್ಲರೂ ಒಪ್ಪುತ್ತಾರೆ’ ಎಂದರು.

‘ಶೀಘ್ರದಲ್ಲಿಯೇ ಚಿತ್ರದುರ್ಗ ಅಥವಾ ದಾವಣಗೆರೆಯಲ್ಲಿ ಐದು ಲಕ್ಷಕ್ಕಿಂತ ಹೆಚ್ಚು ದಲಿತ ಸಮುದಾಯದ ಜನರನ್ನು ಸೇರಿಸಿ ಸಮಾವೇಶ ನಡೆಸಿ ಕಾಂಗ್ರೆಸ್ಗೆ ಬಿಸಿ ಮುಟ್ಟಿಸಲಾಗುವುದು’ ಎಂದು ಎಚ್ಚರಿಸಿದರು.

ಛಲವಾದಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ ಮಾತನಾಡಿ, ‘ಛಲವಾದಿ ಸಮುದಾಯದ 5ನೇ ರಾಜ್ಯಮಟ್ಟದ ಸಮ್ಮೇಳನವನ್ನು ಈ ಬಾರಿ ಚಿತ್ರದುರ್ಗದಲ್ಲಿ ಆಯೋಜಿಸುತ್ತಿದ್ದೇವೆ. ಮಧ್ಯ ಕರ್ನಾಟಕದಲ್ಲಿ ಛಲವಾದಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಲಾಗುವುದು. ಚಿತ್ರದುರ್ಗ ಕರ್ನಾಟಕದ ಕೇಂದ್ರಸ್ಥಾನದಲ್ಲಿದ್ದು ಎಲ್ಲರಿಗೂ ಅನುಕೂಲವಾಗಲಿ ಎನ್ನುವ ಕಾರಣಕ್ಕಾಗಿಯೇ ಚಿತ್ರದುರ್ಗದಲ್ಲಿ ಈ ಸಮ್ಮೇಳನ ಮಾಡುವ ಮೂಲಕ ರಾಜ್ಯದಲ್ಲಿ ಛಲವಾದಿಗಳ ಶಕ್ತಿ ಏನೆಂದು ಸಾಬೀತು ಮಾಡುತ್ತೇವೆ’ ಎಂದರು.

ಮುಖಂಡರಾದ ಎಚ್.ಅಣ್ಣಪ್ಪ ಸ್ವಾಮಿ, ದಯಾನಂದ್, ಎಸ್.ಎನ್. ರವಿಕುಮಾರ್, ಶಿವಪ್ರಸಾದ್ ಎಸ್. ಜಯರಾಂ ಕೆ, ಚಂದ್ರಪ್ಪ, ಪ್ರದೀಪ್ ಕುಮಾರ್, ನವೀನ್ಕುಮಾರ್ ಎಂ, ರಂಗಸ್ವಾಮಿ ಚಿಕ್ಕಪುರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-44-787398703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.