ಚಳ್ಳಕೆರೆ: ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಡಿಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ನೀರು ಸರಬರಾಜಿಗೆ ಸಂಬಂಧಿಸಿದಂತೆ ಕೊಳವೆಬಾವಿಯನ್ನು ದುರಸ್ತಿಪಡಿಸಲು ಪಿಡಿಒಗೆ ಸೂಚನೆ ನೀಡಿತು.

ಕುಡಿಯುವ ನೀರಿನ ಸಮಸ್ಯೆ ಹಾಗೂ ಅಧಿಕಾರಿಗಳ ಅಸಡ್ಡೆ ವಿರುದ್ಧ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂಭಾಗ ಬುಧವಾರ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆ ಬುಧವಾರ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಗ್ರಾಮಕ್ಕೆ ಆಡಳಿತಾಧಿಕಾರಿ ಕೆ.ಎಸ್. ಸುರೇಶ್, ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಎಇಇ ದಯಾನಂದ ಸ್ವಾಮಿ, ಪಂಚಾಯಿತಿ ಇಒ ಶಶಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಳವೆ ಬಾವಿಯನ್ನು ತುರ್ತಾಗಿ ದುರಸ್ತಿಪಡಿಸಿ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸಬೇಕು ಎಂದು ಪಿಡಿಒ ಗೌತಮಿಗೆ ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-44-916281090

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.