ಚಿತ್ರದುರ್ಗ: ‘ಒತ್ತುವರಿಯಿಂದ ಜಿಲ್ಲೆಯಲ್ಲಿ ಕೆರೆಗಳ ವಿಸ್ತೀರ್ಣ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಕೆರೆಗಳ ಒತ್ತುವರಿ ತಡೆಗೆ ಜಿಯೋ ಫೆನ್ಸಿಂಗ್ ಹಾಗೂ ವಿಸ್ತೀರ್ಣದ ಮಾಹಿತಿಯುಳ್ಳ ಫಲಕಗಳನ್ನು ಅಳವಡಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ ನೀಡಿದರು.

ಸಮುದಾಯ ಆಧಾರಿತ ಕೆರೆ ಬಳಕೆದಾರರ ಸಂಘಗಳಿಗೆ ಕೆರೆಗಳ ನಿರ್ವಹಣೆ ಮತ್ತು ಸಂರಕ್ಷಣೆ ಹೊಣೆ ವಹಿಸುವ ಕುರಿತು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೆರೆ ಸಂರಕ್ಷಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಕೆರೆಗಳ ಮೂಲ ಸ್ವರೂಪವನ್ನು ಉಳಿಸಿಕೊಳ್ಳಲು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೆರೆಗಳ ಸರ್ವೆ ಮಾಡಿಸಿ ಗಡಿ ಗುರುತಿಸಬೇಕು. ಕೆರೆಯ ಗಡಿಭಾಗದಲ್ಲಿ ದೊಡ್ಡ ಕಂದಕಗಳನ್ನು ತೋಡಿ, ಅಲ್ಲಿ ಸಾಲು ಮರಗಳನ್ನು ನೆಡುವ ಮೂಲಕ ಜಿಯೋ ಫೆನ್ಸಿಂಗ್ ಮಾಡಬೇಕು. ಇದರಿಂದ ಭವಿಷ್ಯದಲ್ಲಿ ಒತ್ತುವರಿಯಾಗುವುದನ್ನು ತಡೆಯಬಹುದು’ ಎಂದರು.

‘ಪ್ರತಿಯೊಂದು ಕೆರೆಯ ಮಾಲೀಕತ್ವ, ಸರ್ವೇ ಸಂಖ್ಯೆ, ನಿಖರ ವಿಸ್ತೀರ್ಣ ಮತ್ತು ಸಮುದ್ರ ಮಟ್ಟದಿಂದ ಇರುವ ಎತ್ತರವನ್ನು ಒಳಗೊಂಡ ಮಾಹಿತಿ ಫಲಕಗಳನ್ನು ಇಲಾಖೆಯ ಅನುದಾನದಲ್ಲಿ ಅಳವಡಿಸಬೇಕು. ಕೆರೆಗೆ ಹಾನಿ ಮಾಡಿದರೆ ಅಥವಾ ಅಕ್ರಮ ಎಸಗಿದರೆ ಯಾವ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿಯುಳ್ಳ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.

‘ಕೆರೆಗಳಲ್ಲಿ ಹೂಳು ಎತ್ತುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ರೈತರು ತಮ್ಮ ಜಮೀನುಗಳಿಗೆ ಮಣ್ಣು ಸಾಗಿಸಲು ಕೆರೆ ಸಂಘಗಳ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕು. ಕೆರೆಗಳಲ್ಲಿ ಹೂಳೆತ್ತುವ ನೆಪದಲ್ಲಿ ಜೆಸಿಬಿ ಬಳಸಿ ಆಳವಾಗಿ ಮಣ್ಣು ತೆಗೆಯುವುದು ಅವೈಜ್ಞಾನಿಕ. ಇಲಾಖೆಯ ನಿಯಮದಂತೆ ಮಾತ್ರ ಹೂಳೆತ್ತಲು ಅವಕಾಶವಿದೆ. ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಕೃಷಿ ಉದ್ದೇಶಕ್ಕೆ ಮಾತ್ರ ಹೂಳು ತೆಗೆಯಲು ಆದ್ಯತೆ ನೀಡಬೇಕು. ವಾಣಿಜ್ಯ ಉದ್ದೇಶಕ್ಕಾಗಿ ಮರಳು ಅಥವಾ ಗ್ರಾವೆಲ್ ತೆಗೆಯುವುದಕ್ಕೆ ಅವಕಾಶ ನೀಡಬಾರದು’ ಎಂದರು.

‘ಭವಿಷ್ಯದಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆಗಳಿವೆ. ಜಲಮೂಲಗಳ ರಕ್ಷಣೆ ಮುಖ್ಯವಾಗಿದೆ. ಅಧಿಕಾರಿಗಳು ಕೆರೆಗಳ ಅಭಿವೃದ್ಧಿಗೆ ಅಗತ್ಯವಿರುವ ಅಂದಾಜು ಪಟ್ಟಿ ಸಿದ್ಧಪಡಿಸಿ, ಜಿಲ್ಲಾ ಖನಿಜ ಪ್ರತಿಷ್ಠಾನ ಅಥವಾ ಲಭ್ಯವಿರುವ ಇತರ ಅನುದಾನಗಳ ಮೂಲಕ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಬೇಕು. ಕೆರೆಗಳ ಮೀನು ಹರಾಜು ಪ್ರಕ್ರಿಯೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಂಘ-ಸಂಸ್ಥೆಗಳು ಸಲ್ಲಿಸಿರುವ ಮನವಿಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದರು.

ಸಣ್ಣ ನೀರಾವರಿ ಇಲಾಖೆ ಇಇ ಕೆ.ಎಂ.ಮೇಘರಾಜ್, ಎಚ್.ಜಿ.ಅಣ್ಣಪ್ಪ, ಪಂಚಾಯತ್ ರಾಜ್ ಇಇ ಅವಿನಾಶ್ ಎಸ್., ಕುಡಾ ಆಯುಕ್ತ ಸೋಮಶೇಖರ್, ಕೆರೆ ಬಳಕೆದಾರರ ಸಂಘದ ಅಧ್ಯಕ್ಷ ನಾಗರಾಜಯ್ಯ, ಕಾರ್ಯದರ್ಶಿ ಜಿ.ಆರ್.ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-44-1093917948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.