ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯೂರು | ಲೋಕ ಅದಾಲತ್‌: ಒಂದಾದ ದಂಪತಿ

Published 18 ಮಾರ್ಚ್ 2024, 15:59 IST
Last Updated 18 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಹಿರಿಯೂರು: ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕ ಅದಾಲತ್‌ನಲ್ಲಿ ಎರಡು ವರ್ಷದ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಒಂದಾದರು. ‌

ಇದರಿಂದ ಅದಾಲತ್‌ನಲ್ಲಿ ಭಾಗಿಯಾಗಿದ್ದ ಎಲ್ಲರಲ್ಲೂ ಸಂತಸ ಕಂಡುಬಂತು.

ಕೌಟುಂಬಿಕ ಕಾರಣದಿಂದ ವಿಚ್ಛೇದನಕ್ಕೆ ಈ ದಂಪತಿ 2022ರಲ್ಲಿ ಅರ್ಜಿ ಸಲ್ಲಿಸಿದ್ದರು.

ಅದಾಲತ್‌ನಲ್ಲಿ 27 ಸಿವಿಲ್ ಪ್ರಕರಣಗಳು ಹಾಗೂ 413 ಕ್ರಿಮಿನಲ್ ಪ್ರಕರಣಗಳು, ಬ್ಯಾಂಕ್‌ ಸಂಬಂಧಿತ 10 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ಈ ಮೂಲಕ ₹ 34 ಲಕ್ಷ ಪರಿಹಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ಮೊಯಿನುದ್ದೀನ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಚ್.ಡಿ. ಶ್ರೀಧರ್, ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT