ಚಿತ್ರದುರ್ಗ: ‘ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಸಿಎಂಸಿಆರ್ಐ)ಯಲ್ಲಿ ಕೆಲಸ ಕೊಡಿಸುವುದಾಗಿ ವಂಚಕರು ಉದ್ಯೋಗಾಕಾಂಕ್ಷಿಗಳಿಂದ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಂತಹವರಿಗೆ ಹಣ ಕೊಟ್ಟು ಮೋಸ ಹೋದರೆ ಅದಕ್ಕೆ ಸಿಎಂಸಿಆರ್ಐ ಹೊಣೆಯಲ್ಲ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಬಿ.ವೈ.ಯುವರಾಜ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು,‘ಆಕ್ಷಾಂಕ್ಷಿಗಳು ನಿತ್ಯವೂ ಜನಪ್ರತಿನಿಧಿಗಳ ಶಿಫಾರಸ್ಸು ಪತ್ರದೊಂದಿಗೆ ಸಂಸ್ಥೆಗೆ ನಿತ್ಯ ಅರ್ಜಿ ಸಲ್ಲಿಸುತ್ತಿದ್ದಾರೆ. ಜೊತೆಯಲ್ಲಿ ಮಧ್ಯವರ್ತಿಗಳನ್ನೂ ಕರೆದುಕೊಂಡು ಬರುತ್ತಿದ್ದಾರೆ. ಸಂಸ್ಥೆಯಲ್ಲಿ ಯಾವುದೇ ನೇಮಕಾತಿ ನಡೆಯುತ್ತಿಲ್ಲ. ಹಾಗೊಮ್ಮೆ ಮಾಡುವುದಿದ್ದಲ್ಲಿ ಪತ್ರಿಕಾ ಪ್ರಕಟಣೆ ನೀಡಿ, ಸರ್ಕಾರದ ನಿಯಮಾನುಸಾರ ಮೀಸಲಾತಿ ಹಾಗೂ ಪಡೆದ ಅಂಕಗಳ ಅನ್ವಯ ನೇಮಕಾತಿ ನಡೆಸಲಾಗುತ್ತದೆ. ಆದ್ದರಿಂದ ಯಾವುದೇ ಶಿಫಾರಸ್ಸು, ಆಮಿಷಗಳಿಗೆ ಬಲಿಯಾಗಬೇಡಿ’ ಎಂದು ಅವರು ಮನವಿ ಮಾಡಿದ್ದಾರೆ.

‘ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಈಗ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಹಸ್ತಾಂತರವಾಗಿದ್ದು, ಬೋಧನಾ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಆದರೆ, ಇತರೆ ಮೂಲ ಸೌಕರ್ಯಗಳನ್ನು ಅನುದಾನ ಲಭ್ಯತೆ ಆಧಾರದಲ್ಲಿ ಒದಗಿಸಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-44-1598043417

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.