ಚಿತ್ರದುರ್ಗ: ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ (66) ಭಾನುವಾರ ನಸುಕಿನ3.15ರ ವೇಳೆಗೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರ ಗೌರವಾರ್ಥ ರಾಜ್ಯದಲ್ಲಿ ಮಂಗಳವಾರದವರೆಗೆ (ಮೇ 12) ಶೋಕಾಚರಣೆ ಘೋಷಿಸಲಾಗಿದ್ದು, ಸರ್ಕಾರದ ಅಧಿಕೃತ ಕಾರ್ಯಕ್ರಮಗಳು ನಡೆಯುವುದಿಲ್ಲ. ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಸುಧಾಕರ್ ಅವರಿಗೆ ಪತ್ನಿ ಹರ್ಷಿಣಿ, ಪುತ್ರ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಇದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಸುಧಾಕರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಭಾನುವಾರ ಮಧ್ಯಾಹ್ನ 2.25ಕ್ಕೆ ಮೃತದೇಹವನ್ನು ಹಿರಿಯೂರು ಪಟ್ಟಣಕ್ಕೆ ತರಲಾಯಿತು. ನೆಹರೂ ಮೈದಾನದಲ್ಲಿ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು. ಸಂಜೆ ಅವರ ಹುಟ್ಟೂರು ಚಳ್ಳಕೆರೆಯ ನಿವಾಸದಲ್ಲಿ ಕುಟುಂಬದ ಸದಸ್ಯರು ಜೈನ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ಸೋಮವಾರ ಬೆಳಿಗ್ಗೆ ಚಳ್ಳಕೆರೆಯ ಸುಧಾಕರ್ ಸ್ಟೇಡಿಯಂನಲ್ಲಿ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಸಂಜೆ 4 ಗಂಟೆಗೆ ವಿಠಲ ನಗರದಲ್ಲಿರುವ ಷಟಲ್ ಕೋರ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾರ್ಚ್ 27ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಡಿ ಚಿಪ್ಪಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮರುದಿನ ಆಸ್ಪತ್ರೆಯಲ್ಲೇ ಜನ್ಮದಿನ ಆಚರಿಸಿಕೊಂಡಿದ್ದರು. ಚೇತರಿಕೆ ಹಂತದಲ್ಲಿದ್ದ ಅವರು ಮಾರ್ಚ್ 30ರಂದು ಶ್ವಾಸಕೋಶದ ಸೋಂಕಿಗೆ ಒಳಗಾಗಿದ್ದರು. ನಂತರ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 15 ದಿನದ ಹಿಂದೆ ಗಂಭೀರ ಸ್ಥಿತಿಗೆ ತಲುಪಿದ್ದಾಗ ಹೈದರಾಬಾದ್ನ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ವಾರದ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೂ, ಸೋಂಕಿನಿಂದ ಮುಕ್ತರಾಗಿರಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-51-1153016195

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.