ಚಿತ್ರದುರ್ಗ: ಶೇಂಗಾ ಬಿತ್ತನೆ ಬೀಜಕ್ಕೆ ಸರ್ಕಾರ ನಿಗದಿಪಡಿಸಿದ ದರದ ಬಗ್ಗೆ ಜಿಲ್ಲೆಯ ಶಾಸಕರು ಹಾಗೂ ಸಂಸದರು ತೀವ್ರ ಆಕ್ಷೇಪ ಹೊರಹಾಕಿದರು. ಇದಕ್ಕೆ ಸ್ಪಂದಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ, ಸಬ್ಸಿಡಿ ಮಿತಿ ಹೆಚ್ಚಳದ ಬಗ್ಗೆ ಆಲೋಚನೆ ಮಾಡುವ ಆಶ್ವಾಸನೆ ನೀಡಿದರು.

ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಕುರಿತು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಸಭೆ ನಡೆಯಿತು. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು, ಬೆಳೆ ವಿಮೆ, ಮಳೆ, ನರೇಗಾ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಶೇಂಗಾ ಬಿತ್ತನೆ ಬೀಜದ ಬೆಲೆಗೆ ಬಿಜೆಪಿ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದರು.

ಸಂಸದ ಎ.ನಾರಾಯಣಸ್ವಾಮಿ ವಿಷಯ ಪ್ರಸ್ತಾಪಿಸಿ, ‘ಚಿತ್ರದುರ್ಗ ಜಿಲ್ಲೆಯಲ್ಲಿ ಶೇಂಗಾ ಪ್ರಮುಖ ಬೆಳೆ. ಜಿಲ್ಲೆಯ 1.45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬೆಳೆಯಲಾಗುತ್ತಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸುವ ಶೇಂಗಾ ಬಿತ್ತನೆ ಬೀಜ ಮಾರುಕಟ್ಟೆ ದರಕ್ಕಿಂತ ಅಧಿಕವಾಗಿದೆ. ಇದರಿಂದ ರೈತರಿಗೆ ತೊಂದರೆ ಆಗುತ್ತಿದೆ’ ಎಂದರು.

ಇದಕ್ಕೆ ಧ್ವನಿಗೂಡಿಸಿದ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ‘ಕಡಿಮೆ ಬೆಲೆಗೆ ಸಿಗುವ ಬೀಜವನ್ನು ಖರೀದಿಸಲು ರೈತರು ಮುಂದಾಗುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಗುಣಮಟ್ಟದ ಬೀಜಗಳು ಲಭ್ಯ ಆಗುತ್ತಿವೆ. ರೈತ ಸಂಪರ್ಕ ಕೇಂದ್ರದಲ್ಲಿ ನೀಡುವ ಬೀಜದ ದರ ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಮಾರುಕಟ್ಟೆಗಿಂತ ರೈತ ಸಂಪರ್ಕ ಕೇಂದ್ರದಲ್ಲಿ ದೊರೆಯುವ ಬಿತ್ತನ ಬೀಜ ಕಡಿಮೆ ಬೆಲೆ ನಿಗದಿ ಮಾಡಬೇಕು ಎಂಬುದು ರೈತರ ನಿರೀಕ್ಷೆ. ಆದರೆ, ಇದು ಭಿನ್ನವಾಗಿದೆ. ಈ ಬಗ್ಗೆ ಹಿರಿಯೂರು ಕ್ಷೇತ್ರದ ರೈತರು ಜನಪ್ರತಿನಿಧಿಗಳನ್ನು ಪ್ರಶ್ನಿಸುತ್ತಿದ್ದಾರೆ. ಅವರಿಗೆ ಉತ್ತರ ನೀಡುವುದು ಕಷ್ಟವಾಗಿದೆ’ ಎಂದು ಶಾಸಕಿ ಕೆ.ಪೂರ್ಣಿಮಾ ಧ್ವನಿಗೂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಬಿ.ಸಿ.ಪಾಟೀಲ, ‘ಸರ್ಕಾರ ಉತ್ತಮ ಗುಣಮಟ್ಟದ ಬೀಜಗಳನ್ನು ಖರೀದಿಸಿದೆ. ಬೀಜದ ವಿಂಗಡಣೆ, ಸಂಸ್ಕರಣೆಯ ಕಾರಣಕ್ಕೆ ದರ ಹೆಚ್ಚಾಗುತ್ತಿದೆ. ಮಾರುಕಟ್ಟೆಯಲ್ಲಿ ಲಭ್ಯ ಇರುವ ಬೀಜಕ್ಕಿಂತ ಸರ್ಕಾರ ವಿತರಿಸುವ ಬೀಜ ಉತ್ತಮ ಇಳುವರಿ ನೀಡಬಲ್ಲದು. ಕಳಪೆ ಬೀಜದತ್ತ ಆಕರ್ಷಿತರಾಗದಂತೆ ರೈತರಿಗೆ ಅರಿವು ಮೂಡಿಸಬೇಕಿದೆ’ ಎಂದು ಹೇಳಿದರು.

‘ಆಂಧ್ರಪ್ರದೇಶದ ಕದ್ರಿ ಲೇಪಾಕ್ಷಿ ಎಂಬ ತಳಿ ಉತ್ತಮ ಇಳುವರಿ ನೀಡುತ್ತಿದೆ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹೆಚ್ಚಿನ ರೈತರು ಈ ಬಗ್ಗೆ ಒಲವು ತೋರುತ್ತಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಸ್ವಷ್ಟನೆ ನೀಡುವ ಅಗತ್ಯವಿದೆ’ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

ಸಬ್ಸಿಡಿ ದರದಲ್ಲಿ ರಸಗೊಬ್ಬರ:‘ಡಿಎಪಿ ರಸಗೊಬ್ಬರಕ್ಕೆ ಸರ್ಕಾರ ₹ 1,200 ಹಾಗೂ ಯೂರಿಯಾಗೆ ₹ 1,000 ಸಬ್ಸಿಡಿ ನೀಡುತ್ತಿದೆ. ಈ ಸೌಲಭ್ಯದ ಬಗ್ಗೆ ರೈತರಿಗೆ ತಿಳಿವಳಿಕೆ ಇಲ್ಲ. ಕೃಷಿ ಇಲಾಖೆ ಅಧಿಕಾರಿಗಳು ಸರ್ಕಾರದ ಸೌಲಭ್ಯಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಬೇಕು. ರಸಗೊಬ್ಬರದ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆ ಹೋಗಲಾಡಿಸಬೇಕು’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ಕುಮಾರ್ ಅವರಿಗೆ ಸೂಚನೆ ನೀಡಿದರು.

‘ಕಳೆದ ವರ್ಷ ರಸಗೊಬ್ಬರಕ್ಕೆ ಕೊರತೆ ಉಂಟಾಗಿತ್ತು. ಅದನ್ನು ಗಮನದಲ್ಲಿ ಇಟ್ಟುಕೊಂಡು ರಸಗೊಬ್ಬರ ಪೂರೈಕೆಗೆ ಪ್ರಸ್ತಾವ ಸಲ್ಲಿಸಬೇಕು. ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವವರ ಬಗ್ಗೆ ನಿಗಾ ಇಡಬೇಕು. ನಕಲಿ ಬಿತ್ತನೆ ಬೀಜದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ಹೇಳಿದರು.

‘ಈ ವರ್ಷ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಕೃಷಿ ಇಲಾಖೆ ಮಾಡಿಕೊಂಡಿದೆ. ಬಿತ್ತನೆ ಬೀಜದಲ್ಲಿ ಶೇಂಗಾ, ತೋಗರಿ ಸೇರಿ 8,303 ಟನ್ ಬೀಜ ದಾಸ್ತಾನು ಇದೆ. ಯೂರಿಯಾ, ಪೋಟಾಷ್ ಸೇರಿ 21,331 ಟನ್ ಗೊಬ್ಬರ ಜಿಲ್ಲೆಯಲ್ಲಿ ದಾಸ್ತಾನು ಇದೆ’ ಎಂದು ಹೇಳಿದರು.

22 ಸಾವಿರ ಕುಟುಂಬಕ್ಕೆ ನೆರವು

ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ಕೇಂದ್ರ ಸರ್ಕಾರ ಆಹಾರ ಧಾನ್ಯ ಬೆಳೆಗಳಿಗೆ ಉತ್ತೇಜನ ನೀಡುತ್ತಿದೆ. ಜಿಲ್ಲೆಯಲ್ಲಿ ₹ 1.63 ಕೋಟಿ ವೆಚ್ಚದ ಶೇಂಗಾ ಹಾಗೂ ತೊಗರಿ ಬಿತ್ತನೆ ಬೀಜಗಳನ್ನು 22 ಸಾವಿರ ಕುಟುಂಬಗಳಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

‘ಬಹುಬೆಳೆ ಪದ್ಧತಿಯನ್ನು ರೈತರು ರೂಢಿಸಿಕೊಂಡರೆ ನಷ್ಟ ತಪ್ಪಿಸಲು ಸಾಧ್ಯವಿದೆ. ಶೇಂಗಾ ಬೆಳೆಯಲ್ಲಿ ತೊಗರಿ ಬೆಳೆಯಲು ಸಾಧ್ಯವಿದೆ. 17 ಸಾವಿರ ಪ್ಯಾಕೇಟ್ ತೊಗರಿ ಹಾಗೂ 5 ಸಾವಿರ ಶೇಂಗಾ ಕಿಟ್ಗಳನ್ನು ಕೇಂದ್ರ ಸರ್ಕಾರ ನೀಡಿದೆ. ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಕೃಷಿ ಇಲಾಖೆ ಮಾಡಲಿದೆ. ಕೃಷಿ ಕ್ಷೇತ್ರದ ಸುಧಾರಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಜನರಿಗೆ ತಿಳಿಸಬೇಕು’ ಎಂದು ತಾಕೀತು ಮಾಡಿದರು.

ರೈತರ ಖಾತೆಗೆ ರಾಗಿ ಹಣ

ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದ ರಾಗಿ ಹಾಗೂ ಭತ್ತದ ಹಣದ ಪಾವತಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ₹ 300 ಕೋಟಿ ಬಿಡುಗಡೆ ಮಾಡಿದ್ದಾರೆ. ರೈತರ ಖಾತೆಗೆ ಶೀಘ್ರವೇ ಜಮಾ ಆಗಲಿದೆ ಎಂದು ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

‘ರಾಗಿ ಮಾರಾಟ ಮಾಡಿದ ರೈತರಿಗೆ ಹಣ ಪಾವತಿ ಆಗಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿ ಹಣ ಬಿಡುಗಡೆ ಮಾಡಿದ್ದಾರೆ’ ಎಂದು ಹೇಳಿದರು.

‘ಬೆಳೆ ವಿಮೆ ಪಾವತಿಯಲ್ಲಿ ದೊಡ್ಡ ಲೋಪ ಉಂಟಾಗಿತ್ತು. 2015ರಿಂದಲೂ ಕಂಪನಿಗಳು ಬಾಕಿ ಉಳಿಸಿಕೊಂಡಿದ್ದವು. ಈ ಬಗ್ಗೆ ಎಚ್ಚರಿಕೆ ನೀಡಿ ರೈತರಿಗೆ ವಿಮೆ ಪಾವತಿ ಆಗುವಂತೆ ನೋಡಿಕೊಂಡಿದ್ದೇನೆ. ಬಾಕಿ ಇರುವ ವಿಮೆ ಪರಿಹಾರ ಶೀಘ್ರದಲ್ಲೇ ಪಾವತಿ ಆಗಲಿದೆ’ ಎಂದರು.

ವಿಧಾನಪರಿಷತ್ ಸದಸ್ಯ ಎಂ.ಚಿದಾನಂದಗೌಡ, ಹೆಚ್ಚುವರಿ ಕೃಷಿ ನಿರ್ದೇಶಕ ದಿವಾಕರ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.