ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಮುಂದಿನ ರಾಜ್ಯ ಬಜೆಟ್ನಲ್ಲಿ ₹ 5,000 ಕೋಟಿ ಅನುದಾನ ಮೀಸಲಿಡುವಂತೆ ಹಾಗೂ ತಾಲ್ಲೂಕಿನ ಗೋನೂರು ಅಕ್ವಡೆಕ್ಟ್ವರೆಗೆ ಭದ್ರಾ ನೀರು ಹರಿಸಲು ತುರ್ತು ಕಾಮಗಾರಿಗಾಗಿ ₹ 300 ಕೋಟಿ ಅನುದಾನ ಒದಗಿಸುವಂತೆ ಉಸ್ತುವಾರಿ ಸಚಿವ ಡಿ. ಸುಧಾಕರ್ ಹಾಗೂ ಜಿಲ್ಲೆಯ ಶಾಸಕರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಯೋಜನೆಯ ಮಾಹಿತಿ ವಿವರಿಸಿದರು. ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತವು ₹ 21,167 ಕೋಟಿಗಳಾಗಿದ್ದು, ಇಲ್ಲಿಯವರೆಗೆ ಅಂದಾಜು ₹ 11,409 ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಇನ್ನೂ ₹ 10,000 ಕೋಟಿ ಅನುದಾನದ ಅವಶ್ಯಕತೆಯಿದೆ ಎಂದು ಮಾಹಿತಿ ಹಂಚಿಕೊಂಡರು.

ಮಧ್ಯ ಕರ್ನಾಟಕದ ರೈತರು ಐದು ದಶಕಗಳಿಂದ ನೀರಾವರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಮಳೆಯ ಅಭಾವದಿಂದಾಗಿ ಕೃಷಿ ಚಟುವಟಿಕೆ ಕುಂಠಿತಗೊಂಡು ಜನ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದಾರೆ. ಯೋಜನೆ ಜಾರಿಗಾಗಿ ರೈತ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಬರುವ ಬಜೆಟ್ನಲ್ಲಿ ಆದ್ಯತೆ ಮೇರೆಗೆ ₹ 5,000 ಕೋಟಿ ಹಂಚಿಕೆ ಮಾಡುವಂತೆ ಒತ್ತಾಯಿಸಿದರು.

ಚಿತ್ರದುರ್ಗ ಶಾಖಾ ಕಾಲುವೆಯು ಸುಮಾರು 152 ಕೆರೆಗಳನ್ನು ತುಂಬಿಸಲಿದ್ದು, ಸೂಕ್ಷ್ಮ ನೀರಾವರಿ ವ್ಯವಸ್ಥೆಯಡಿಯಲ್ಲಿ 3 ಲಕ್ಷ ಎಕರೆ ಭೂಮಿಗೆ ನೀರು ಒದಗಿಸಲಿದೆ. ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದ ಭೂ ಸಮಸ್ಯೆಯು ಸುಮಾರು 4 ವರ್ಷಗಳಿಂದ ಬಾಕಿ ಉಳಿದಿತ್ತು. ಕಳೆದ ಮಾರ್ಚ್ನಲ್ಲಿ ಉಪಮುಖ್ಯಮಂತ್ರಿಗಳು ಅಬ್ಬಿನಹೊಳೆ ಗ್ರಾಮಕ್ಕೆ ಭೇಟಿ ನೀಡಿ ರೈತರಿಗೆ ಭೂ ಪರಿಹಾರದ ಬಗ್ಗೆ ಭರವಸೆ ನೀಡಿದರು. ವಿಧಾನಸೌಧದಲ್ಲಿ ರೈತರೊಂದಿಗೆ ಸಭೆ ನಡೆಸಿದ ನಂತರ ಲೋಕ ಅದಾಲತ್ ಮೂಲಕ ಪರಿಹಾರ ದೊರಕಿತು ಎಂದು ತಿಳಿಸಿದರು.

ಅಬ್ಬಿನಹೊಳೆ ಗ್ರಾಮದಲ್ಲಿ ಕಾಲುವೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಪ್ರಸ್ತುತ, ಚಿತ್ರದುರ್ಗ ಶಾಖಾ ಕಾಲುವೆಯ ವೈ–ಜಂಕ್ಷನ್ನ ಚೈನೇಜ್ 0.00 ಕಿಮೀ ನಿಂದ ಚೈನೇಜ್ 114 ಕಿ.ಮೀ. ನಿರ್ಮಾಣ ಕಾರ್ಯವು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ವಿಶ್ವೇಶ್ವರಯ್ಯ ಜಲ ನಿಗಮವು ಫೆಬ್ರುವರಿ ಅಂತ್ಯದ ವೇಳೆಗೆ ಚಿತ್ರದುರ್ಗ ಬಳಿಯ ಗೋನೂರು ಅಕ್ವೆಡಕ್ಟ್ ಚೈನೇಜ್ 114 ಕಿ.ಮೀ.ವರೆಗೆ ಪ್ರಾಯೋಗಿಕವಾಗಿ ನೀರನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಜ. 4ರಂದು ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ನಿರ್ಮಾಣ ಕಾರ್ಯವನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

ಗೋನೂರು ಅಕ್ವೆಡೆಕ್ಟ್ವರೆಗೆ ಫೆಬ್ರುವರಿ ಅಂತ್ಯದ ವೇಳೆಗೆ ಚೈನೇಜ್ 114 ಕಿ.ಮೀ. ವರೆಗೆ ನೀರು ಬಿಡುಗಡೆ ಮಾಡಿದರೆ ಕಡೂರು, ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ ಮತ್ತು ಚಳ್ಳಕೆರೆ ತಾಲ್ಲೂಕುಗಳಲ್ಲಿ 90 ಕೆರೆಗಳಿಗೆ ನೀರು ಹರಿಸಬಹುದಾಗಿದೆ. ಬಾಕಿ ಇರುವ ಕಾಮಗಾರಿ ಅನುದಾನ ಬಿಡುಗಡೆ ವಿಳಂಬವಾಗುತ್ತಿರುವ ಕಾರಣಗಳಿಂದಾಗಿ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದ ಕಾಮಗಾರಿ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನವಿದೆ ಎಂದು ತಿಳಿಸಿದರು.

ಬರದ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಇದೆ. ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಈ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಪ್ರಾಯೋಗಿಕವಾಗಿ ನೀರು ಹರಿಸಲು ತುರ್ತಾಗಿ ₹ 300 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು. ಈ ವೇಳೆ ಶಾಸಕರಾದ ಟಿ.ರಘುಮೂರ್ತಿ ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಕೆ.ಸಿ.ವೀರೇಂದ್ರ ಅವರು ಹಾಜರಿದ್ದರು.

ತುರ್ತು ಕಾಮಗಾರಿಗೆ ಬೇಗ ಹಣ ನೀಡಲು ಮನವಿ ಜಿಲ್ಲೆಯಾದ್ಯಂತ ರೈತ ಸಂಘಟನೆಗಳಿಂದ ಹೋರಾಟ ಬರದ ನಾಡಿನ ಯೋಜನೆ ಸಾಕಾರಗೊಳಿಸಲು ಒತ್ತಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.