ಚಿತ್ರದುರ್ಗ: ನಗರದ ಮುರುಘಾ ಮಠದಲ್ಲಿ ಬಸವ ಜಯಂತಿ ಸಂಭ್ರಮಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಏ. 18ರಿಂದ 20ರವರೆಗೆ ವಿವಿಧ ಸಮಾಜ, ಸಂಘ– ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿವೆ.

18ರಂದು ಬೆಳಿಗ್ಗೆ 10.30ಕ್ಕೆ ಐಎಂಎ ಸಭಾಂಗಣದಲ್ಲಿ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಗಳ ಕುರಿತು ಚಿಂತಕ ಜಿ.ಎನ್.ಮಲ್ಲಿಕಾರ್ಜುನಪ್ಪ ರಚಿಸಿರುವ ‘ಜಯದೇವ ಸಿರಿ’ ನಾಟಕ ಕೃತಿ ಲೋಕಾರ್ಪಣೆ ನಡೆಯಲಿದೆ.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಅಧ್ಯಕ್ಷತೆ ವಹಿಸುವರು. ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ಕೃತಿ ಜನಾರ್ಪಣೆಗೊಳಿಸುವರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ದಂಡಿನ ಕೃತಿಯ ಅವಲೋಕನ ಮಾಡಲಿದ್ದಾರೆ.

19ರಂದು ಬೆಳಿಗ್ಗೆ 9ಕ್ಕೆ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಬಸವಾದಿ ಶಿವಶರಣರ ವೇಷಭೂಷಣ ಸ್ಪರ್ಧೆ, 10ಕ್ಕೆ ರಂಗೋಲಿ ಸ್ಪರ್ಧೆ ನಡೆಯಲಿವೆ. ಸಂಜೆ 5.30ಕ್ಕೆ ಶರಣಸ್ಥಲದ ನೆಲೆಯಲ್ಲಿ ಬಸವಣ್ಣ, ವಚನಸಾಹಿತ್ಯ ಮತ್ತು ಭಾರತೀಯ ಸಂವಿಧಾನ ವಿಷಯ ಕುರಿತು ಚಿಂತನಾ ಗೋಷ್ಠಿ ನಡೆಯಲಿದೆ. ನಿವೃತ್ತ ನ್ಯಾಯಾಧೀಶ ಎಚ್.ಬಿಲ್ಲಪ್ಪ, ಉಪನ್ಯಾಸಕ ಜಿ.ವಿ. ಮಂಜುನಾಥ್ ವಿಷಯಾವಲೋಕನ ಮಾಡಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರಿಗೆ ಬಸವಬಂಧು ಅಭಿದಾನ ನೀಡಿ ಸನ್ಮಾನಿಸಲಾಗುತ್ತದೆ.

20ರಂದು ಬೆಳಿಗ್ಗೆ 11ಕ್ಕೆ ಗೋನೂರಿನ ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣನವರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಶಿವಯೋಗಿ ಸಿ. ಕಳಸದ ಅಧ್ಯಕ್ಷತೆ ವಹಿಸಲಿದ್ದಾರೆ. ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-44-1951208317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.