ಚಿತ್ರದುರ್ಗ: ‘ವಸತಿ ಇಲ್ಲದ ಬಡಜನರ ಸಮೀಕ್ಷೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿ ವರ್ಷವಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ಇಲ್ಲಿಯವರೆಗೂ ವಸತಿ ರಹಿತರ ಸರ್ವೆ ನಡೆಸದೇ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಆರೋಪಿಸಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಸದಸ್ಯರು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ನಗರಸಭೆ ಕಚೇರಿ ಎದುರು ಸೇರಿದ ಪ್ರತಿಭಟನಕಾರರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಡವರ ಸಮಸ್ಯೆ ಆಲಿಸುತ್ತಿಲ್ಲ ಎಂದು ಆರೋಪಿಸಿ ಪೌರಾಯುಕ್ತರ ವಿರುದ್ಧ ಧಿಕ್ಕಾರ ಕೂಗಿದರು.

‘ಮಾರ್ಚ್ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿದ್ದೆವು. ಆಗ ಸರ್ವೆ ನಡೆಸಿ ವರದಿ ಕೊಡುವಂತೆ ಸೂಚಿಸಿದ್ದರು. ಇಲ್ಲಿಯವರೆಗೂ ನಗರಸಭೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ನಗರಸಭೆಗೆ ಅರ್ಜಿಗಳನ್ನು ಸಲ್ಲಿಸಿ ಒಂದು ವರ್ಷವಾಗಿದೆ. ನಮ್ಮ ಅರ್ಜಿಗಳನ್ನು ಪೋರ್ಟಲ್ಗೆ ಅಪ್ಲೋಡ್ ಮಾಡಿ ಒಟಿಪಿ ಕೊಡುವವರೆಗೂ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ’ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

‘ಸಂವಿಧಾನಶಿಲ್ಪಿ ಬಿ.ಆರ್.ಅಂಬೇಡ್ಕರ್ ಸರ್ವರಿಗೂ ಸಮಪಾಲು, ಸಮಬಾಳು ಎಂದು ಹೇಳಿದ್ದಾರೆ. ಜನರ ತೆರಿಗೆಯಲ್ಲಿ ನಗರಸಭೆ ನಡೆಯುತ್ತಿದೆ. ಕೂಡಲೇ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿವೇಶನ ಮತ್ತು ವಸತಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ರಾಜೀವ್ಗಾಂಧಿ ವಸತಿ ನಿಗಮ ನಿಯಮಿತದ ನಿವೇಶನ ಮತ್ತು ವಸತಿ ರಹಿತರ ಸಮೀಕ್ಷಾ ಪಟ್ಟಿಗೆ ಸೇರ್ಪಡೆ ಮಾಡಬೇಕು. ನಿವೇಶನಕ್ಕೆ ಅಗತ್ಯ ಸರ್ಕಾರಿ ಭೂಮಿಯನ್ನು ಪ್ರತಿ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಗುರುತಿಸಬೇಕು. ಈಗಾಗಲೇ ಮಂಜೂರಾಗಿರುವ ವಸತಿ ಯೋಜನೆಗಳಿಗೆ ಸರ್ಕಾರ ಅನುದಾನ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.

ಹಾಲಿ ಇರುವ ನಿವೇಶನದ ವಿಸ್ತೀರ್ಣವನ್ನು ಹೆಚ್ಚಿಸಿ ಅಂಗಳ ಮತ್ತು ಹಿತ್ತಲು ಇರುವಂತೆ ಕನಿಷ್ಠ ಒಂದು ಸಾವಿರ ಚದರ ಅಡಿ ನಿವೇಶನ ನೀಡಬೇಕು. ವಸತಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರ ಒದಗಿಸುವ ಸಹಾಯಧನ ಮೊತ್ತವನ್ನು ₹ 5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ತಿ.ಸುಂದರೇಶ್, ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸಿ. ಸುರೇಶ್ಬಾಬು, ಉಪಾಧ್ಯಕ್ಷ ಟಿ.ಆರ್. ಉಮಾಪತಿ, ಬಿ.ಎಚ್. ಹನುಮಂತಪ್ಪ, ಬಿ.ಬಸವರಾಜಪ್ಪ, ಎಂ.ಬಿ. ಜಯದೇವಮೂರ್ತಿ, ಈ.ಸತ್ಯಕೀರ್ತಿ, ಎಸ್.ಬಾಬು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-44-1217963875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.