ಚಿತ್ರದುರ್ಗ: ‘ಅಸಂಘಟಿತ ಕಾರ್ಮಿಕರು ಹಾಗೂ ಮಹಿಳಾ ಸಬಲೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಕಾಳಜಿ ವಹಿಸಿದ್ದಾರೆ. ಈ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ’ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

ನಗರದ ರೋಟರಿ ಬಾಲಭವನದಲ್ಲಿ ಕಟ್ಟಡ ಕಾರ್ಮಿಕರ ಜಿಲ್ಲಾ ಸಂಘದಿಂದ ಮಂಗಳವಾರ ಆಯೋಜಿಸಿದ್ದ ಕಟ್ಟಡ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಕಾರ್ಮಿಕರು ದೇಶದ ದೊಡ್ಡ ಶಕ್ತಿ ಎನ್ನುವುದಕ್ಕಾಗಿ ಕೇಂದ್ರ ಸರ್ಕಾರ ಅನೇಕ ಸವಲತ್ತುಗಳನ್ನು ಒದಗಿಸಿದೆ. ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ರಾಜ್ಯದಲ್ಲಿ 200 ವಸತಿ ಶಾಲೆಗಳನ್ನು ಕಟ್ಟಿಸಿದ್ದೆ. ಕಾರ್ಮಿಕರು ಕಡ್ಡಾಯವಾಗಿ ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರಿಸಿ ಶಿಕ್ಷಣ ಕೊಡಿಸಿ’ ಎಂದರು.

‘ಕಟ್ಟಡ ಕೆಲಸದಲ್ಲಿ ತೊಡಗಿಸಿಕೊಂಡಾಗ ಕಡ್ಡಾಯವಾಗಿ ಸುರಕ್ಷತಾ ಕ್ರಮ ಪಾಲಿಸಬೇಕು. ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಜೀವನ್ ಸುರಕ್ಷಾ ಪಾಲಿಸಿಯನ್ನು ಮಾಡಿಸಬೇಕು. ಅಪಘಾತವಾದರೆ ಪರಿಹಾರ ಸಿಗುತ್ತದೆ’ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಾಲಚಂದ್ರ ಬಗಟಿ ಹೇಳಿದರು.

‘ಕಾರ್ಮಿಕ ಇಲಾಖೆಯಿಂದ ಕಡ್ಡಾಯವಾಗಿ ಗುರುತಿನ ಚೀಟಿ ಪಡೆಯಬೇಕು. ಜೊತೆಗೆ ನಿಗದಿತ ಸಮಯಕ್ಕೆ ನವೀಕರಣ ಮಾಡಿಸಿಕೊಳ್ಳಬೇಕು. ಇಲ್ಲವಾದರೆ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತೀರ’ ಎಂದು ಎಚ್ಚರಿಸಿದರು.

ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಓ. ಜಗದೀಶ್ ಗುಂಡೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-44-43993851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.