ನಾಯಕನಹಟ್ಟಿ: ಐತಿಹಾಸಿಕ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಾಲಯಗಳಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು ಬುಧವಾರ ದೇವಾಲಯದ ಆವರಣದಲ್ಲಿ ಬ್ಯಾಂಕ್ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು.

ಮೊದಲು ಹೊರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ಶಿರಸ್ತೇದಾರ್ ಹಾಗೂ ದೇವಾಲಯ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದಲ್ಲಿ ಬೆಳಿಗ್ಗೆ 10ಕ್ಕೆ ಶುರುವಾದ ಎಣಿಕೆ ಕಾರ್ಯ ಮಧ್ಯಾಹ್ನ 1ಕ್ಕೆ ಮುಕ್ತಾಯವಾಯಿತು. ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ ಸಂಜೆ 4 ಗಂಟೆಗೆ ಮುಕ್ತಾಯವಾಯಿತು.

ಹೊರಮಠದಲ್ಲಿ ₹ 9,36,327, ಒಳಮಠದಲ್ಲಿ ₹ 35,83,445 ಮೊತ್ತ ಸಂಗ್ರಹವಾಗಿದೆ. ನಾಲ್ಕು ತಿಂಗಳ ಅವಧಿಯಲ್ಲಿ ₹ 45,19,772 ಮೊತ್ತ ಸಂಗ್ರಹವಾಗಿದೆ. ಸಂಗ್ರಹವಾದ ಹಣವನ್ನು ಕೆನರಾ ಬ್ಯಾಂಕ್ ಖಾತೆಗೆ ಜಮಾ ಮಾಡಲಾಯಿತು. ಹೊರಮಠ ಮತ್ತು ಒಳಮಠಗಳ ಹುಂಡಿಯಲ್ಲಿ ಹಲವು ಬೆಳ್ಳಿ ನಾಣ್ಯಗಳು, ಬೆಳ್ಳಿ ತೊಟ್ಟಿಲುಗಳು, ಬೆಳ್ಳಿ ಆಭರಣಗಳು, ಆಸ್ಟ್ರೇಲಿಯಾ, ಅಮೆರಿಕಾ ದೇಶದ ಕರೆನ್ಸಿಗಳು ಕಂಡು ಬಂದವು.

ಕಾರ್ಯ ನಿರ್ವಾಹಕ ಅಧಿಕಾರಿ ಎಚ್.ಗಂಗಾಧರಪ್ಪ, ಶಿರಸ್ತೇದಾರ್ ಸದಾಶಿವಪ್ಪ, ಉಪ ತಹಶೀಲ್ದಾರ್ ಬಿ.ಶಕುಂತಲಾ, ಕಂದಾಯ ನಿರೀಕ್ಷಕ ಆರ್.ಚೇತನ್ಕುಮಾರ್, ಸರ್ವಮಂಗಳಾ, ಕಂದಾಯ ಇಲಾಖೆ ಸಿಬ್ಬಂದಿ ಎಚ್.ಎಸ್.ಜಗದೀಶ್, ಹರೀಶ್, ಪುಷ್ಪಾವತಿ, ಶರಣಬಸವ, ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ರತನ್ ಕುಮಾರ್ ದಯಾ, ಸಹಾಯಕ ವ್ಯವಸ್ಥಾಪಕ ಲೋಹಿತ್, ಸಿಬ್ಬಂದಿ ವಿರೂಪಾಕ್ಷ, ರಘುಮೂರ್ತಿ, ಪ್ರಿಯಾಂಕಾ, ಬ್ಯಾಂಕ್ ಮಿತ್ರರಾದ ಎಂ.ಬಿ.ಮಹಾಸ್ವಾಮಿ, ಕೆ.ಎಂ.ಪ್ರಸನ್ನಕುಮಾರ್, ಪುರಂಧರ್, ಎಂ.ಬಿ.ವೆಂಕಟೇಶ್, ದೇಗುಲ ಪಾರುಪತ್ತೇದಾರ ಎಸ್.ಸತೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.