ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಾನುಷ್ಠಾನಕ್ಕೆ ಆಗ್ರಹ: ನಾಯಕನಹಟ್ಟಿ ಬಂದ್‌ಗೆ ಬೆಂಬಲ

Published 13 ಫೆಬ್ರುವರಿ 2024, 7:08 IST
Last Updated 13 ಫೆಬ್ರುವರಿ 2024, 7:08 IST
ಅಕ್ಷರ ಗಾತ್ರ

ನಾಯಕನಹಟ್ಟಿ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತಗತಿಯ ಅನುಷ್ಠಾನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಬರ ಪರಿಹಾರ ಬಿಡುಗಡೆ ಹಾಗೂ ಬೆಳೆ ವಿಮೆಗೆ ಆಗ್ರಹಿಸಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕರೆ ನೀಡಿದ್ದ ಬಂದ್‍ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.

ಬೆಳಿಗ್ಗೆ ಹೂವು, ಹಣ್ಣು, ಸೊಪ್ಪು ತರಕಾರಿ ಮಳಿಗೆ ಸೇರಿ ಪಟ್ಟಣದ ಮುಖ್ಯ ರಸ್ತೆಯ ಎಲ್ಲ ಅಂಗಡಿಗಳು ಬಾಗಿಲು ಮುಚ್ಚಿವೆ. ವಾಹನ ಸಂಚಾರ ವಿರಳವಾಗಿದೆ. ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕೆಆರ್‌ಎಸ್ ಪಕ್ಷ, ದಲಿತಸಂಘರ್ಷ ಸಮಿತಿ, ಮಾದಿಗ ಸೇವಾಟ್ ರಸ್ಟ್, ವರ್ತಕರ ಸಂಘ, ಖಾಸಗಿ ಶಾಲೆಗಳ ಒಕ್ಕೂಟ, ಟ್ರಾಕ್ಟರ್ ಮಾಲೀಕರ ಸಂಘ, ಬಸ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಂದ್ ಬೆಂಬಲಿಸಿ ಬೀದಿಗಿಳಿದಿದ್ದಾರೆ.

ವಾಲ್ಮೀಕಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಬಂದ್ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಧ್ವನಿವರ್ಧಕದ ಮೂಲಕ ಮನವಿ ಮಾಡಿದರು. ಕೆಲವರು ಸ್ವಯಂ ಪ್ರೇರಿತರಾಗಿ ಅಂಗಡಿ ಬಾಗಿಲು ಮುಚ್ಚಿದರು. ವಾಲ್ಮೀಕಿ ವೃತ್ತ, ಪಾದಗಟ್ಟೆ, ಹಟ್ಟಿಮಲ್ಲಪ್ಪನಾಯಕ ವೃತ್ತದಲ್ಲಿ ಜಮಾಯಿಸಿ ಘೋಷಣೆ ಕೂಗಿದರು.

ಪ್ರತಿಭಟನಕಾರರು ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು, ರಾಯದುರ್ಗ, ಕಲ್ಯಾಣದುರ್ಗ, ಹೊಸಪೇಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT