ಚಿತ್ರದುರ್ಗ: ‘ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಮೇ 3 ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಯಲಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ನೀಟ್ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು’ ಎಂದು ತಿಳಿಸಿದರು.

‘ಡೆಸ್ಕ್, ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ಬಿಸಿಲು ಹೆಚ್ಚಾಗಿರುವ ಕಾರಣ ಪರೀಕ್ಷೆ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕರ್ತವ್ಯಕ್ಕೆ ನಿಯೋಜಿಸಿದ ಸಿಬ್ಬಂದಿ ಮತ್ತು ಅಧಿಕಾರಿಗಳು ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು. ಗೈರಾದಲ್ಲಿ ಅಥವಾ ಕರ್ತವ್ಯದಲ್ಲಿ ಲೋಪವೆಸಗಿದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.

‘ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿಯಮಗಳಂತೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ದಿನದಂದು ಓಎಂಆರ್ ಭರ್ತಿ ಮಾಡಲು, ಉತ್ತರಗಳನ್ನು ತುಂಬಲು ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ಕಪ್ಪು ಬಾಲ್ಪೆನ್ ನೀಡಲಾಗುತ್ತದೆ. ವಿದ್ಯಾರ್ಥಿಗಳು ಇದೇ ಪೆನ್ ಬಳಸಬೇಕು. ಪರೀಕ್ಷಾ ನಿಯಮ ಉಲ್ಲಂಘಿಸಿದರೆ ಅದನ್ನು ಅಕ್ರಮ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

‘ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪರೀಕ್ಷೆ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ’ ಎಂದರು.

‘ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ತುರ್ತು ವೈದ್ಯಕೀಯ ಸೇವೆಗೆ ಆರೋಗ್ಯ ಇಲಾಖೆಯಿಂದ ಪ್ರಥಮ ಚಿಕಿತ್ಸಕರ ತಂಡ ನಿಯೋಜಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ದಿವಾಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-44-748267199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.