ಶನಿವಾರ, ಸೆಪ್ಟೆಂಬರ್ 21, 2019
21 °C

ಚಿತ್ರದುರ್ಗದಲ್ಲಿ ನೂತನ ಸಚಿವರಿಗೆ ಮಠಾಧೀಶರಿಂದ ಸನ್ಮಾನ

Published:
Updated:

ಚಿತ್ರದುರ್ಗ: ರಾಜ್ಯ ಸರ್ಕಾರದ ನೂತನ ಸಚಿವರನ್ನು ದಲಿತ ಮತ್ತು ಹಿಂದುಳಿದ ಮಠಾಧೀಶರ ಒಕ್ಕೂಟ ಇಲ್ಲಿನ ಮಾದರ ಚೆನ್ನಯ್ಯ ಗುರುಪೀಠದಲ್ಲಿ ಬುಧವಾರ ಸನ್ಮಾನಿಸಿತು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಜೆ.ಸಿ.ಮಾಧುಸ್ವಾಮಿ ಹಾಗೂ ಬಿ.ಶ್ರೀರಾಮುಲು ಅವರು ಸನ್ಮಾನ ಸ್ವೀಕರಿಸಿದರು.

'ನೆರೆ ಸಂತ್ರಸ್ತರಿಗೆ ಮಠಾಧೀಶರು ಸೇರಿ ಹಲವಾರು ನೆರವು ನೀಡಿದ್ದಾರೆ. ಇದರಲ್ಲಿ ಸಂತ್ರಸ್ತರು ಜೀವನ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಬದುಕು ಕಟ್ಟಿಕೊಳ್ಳಲು ನೆರೆ ಸಂತ್ರಸ್ತರಿಗೆ ಸರ್ಕಾರ ಸೂರು ಕಲ್ಪಿಸಬೇಕು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು' ಎಂದು ದಲಿತ ಮತ್ತು ಹಿಂದುಳಿದ ಮಠಾಧೀಶರ ಒಕ್ಕೂಟದ ಅಧ್ಯಕ್ಷರೂ ಆಗಿರುವ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಚಿವರಲ್ಲಿ ಮನವಿ ಮಾಡಿದರು.

ಮಾದರ ಚೆನ್ನಯ್ಯ ಗುರುಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀಕೃಷ್ಣ ಯಾದವನಂದ ಸ್ವಾಮೀಜಿ ಸೇರಿ 28 ಮಠಗಳ ಸ್ವಾಮೀಜಿ ಇದ್ದರು.

Post Comments (+)