ರಿಯಾಯಿತಿ ದರದ ಬಸ್ ಪಾಸ್ ಶಕ್ತಿ ಯೋಜನೆಯಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ನಗರದಿಂದ 10–15 ಕಿ.ಮೀ ವ್ಯಾಪ್ತಿಯಲ್ಲಿರುವ ಹಳ್ಳಿಗಳಿಗೂ ಸ್ಥಳೀಯ ಬಸ್ ಸಂಚಾರ ಒದಗಿಸಬೇಕು.
ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಆರ್.ಉಮಾ ವಿದ್ಯಾರ್ಥಿನಿ
ನಗರ ಸಾರಿಗೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಪ್ರಯಾಣಿಕರು ವಿದ್ಯಾರ್ಥಿಗಳು ಆಟೊಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಐದಾರು ಜನ ಪ್ರಯಾಣಿಸಬೇಕಾದ ಆಟೊಗಳು 10–15 ಜನರನ್ನು ತುಂಬಿಕೊಂಡು ಓಡಾಡುತ್ತಿವೆ
ಆರ್.ಗೋಪಿ ವಿದ್ಯಾರ್ಥಿ
ನಗರ ಸಾರಿಗೆಗೆ ಬೇಡಿಕೆ ಹೆಚ್ಚಿದೆ. ಸದ್ಯ ಒಂದು ಮಾರ್ಗದಲ್ಲಿ ಬಸ್ ಸಂಚಾರ ನಡೆಸುತ್ತಿದೆ. ಹೆಚ್ಚುವರಿ ಸಿಬ್ಬಂದಿ ನೇಮಕಾತಿಗೊಂಡು ಬಸ್‌ಗಳ ಸಂಖ್ಯೆ ಹೆಚ್ಚಾದರೆ ಮಾತ್ರ ಸೌಲಭ್ಯ ಕಲ್ಪಿಸಲಾಗುತ್ತದೆ
ಕೆ.ವೆಂಕಟೇಶ್ ವಿಭಾಗೀಯ ನಿಯಂತ್ರಣಾಧಿಕಾರಿ ರಾಜ್ಯ ರಸ್ತೆ ಸಾರಿಗೆ ನಿಗಮ