ಚಿತ್ರದುರ್ಗ: ‘ಔಷಧ ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಮೇ 20ರಂದು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘ ದೇಶದಾದ್ಯಂತ ಕರೆ ನೀಡಿರುವ ಮುಷ್ಕರಕ್ಕೆ ಕೇವಲ ನೈತಿಕ ಬೆಂಬಲ ನೀಡಲಾಗುತ್ತದೆ’ ಎಂದು ಸಂಘದ ಜಿಲ್ಲಾ ಘಟಕ ತಿಳಿಸಿದೆ.

ನಗರದ ಶ್ರೀರಾಮ ಬಡಾವಣೆಯ ಔಷಧ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ, ವ್ಯಾಪಾರಸ್ಥರು ಮತ್ತು ಜನರ ಹಿತದೃಷ್ಟಿಯಿಂದ ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ. ಆದ್ದರಿಂದ ಅಂಗಡಿಗಳನ್ನು ಬಂದ್ ಮಾಡದೇ ನೈತಿಕ ಬೆಂಬಲ ನೀಡಲಾಗುತ್ತದೆ ಎಂದು ಸಂಘದ ಪದಾಧಿಕಾರಿಗಳು ಒಮ್ಮತದ ನಿರ್ಧಾರ ಪ್ರಕಟಿಸಿದರು.

ಆನ್ಲೈನ್ ಮೂಲಕ ಔಷಧ ವ್ಯಾಪಾರ ನಡೆಸುವುದನ್ನು ನಿಲ್ಲಿಸಬೇಕು. ಕೋವಿಡ್ ಸಮಯದಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಹಿಂಪಡೆಯಬೇಕು. ಕಾರ್ಪೊರೇಟ್ ಕಂಪನಿಗಳಿಂದ ನಡೆಯುತ್ತಿರುವ ವಿನಾಯಿತಿ ವ್ಯಾಪಾರ ನಿಲ್ಲಿಸಬೇಕು. ನಕಲಿ ಔಷಧಿಗಳ ಹಾವಳಿ ನಿಲ್ಲಿಸಿ, ಸರಳ ಕಾನೂನುಗಳಿಂದ ಔಷಧ ವ್ಯಾಪಾರಿಗಳನ್ನು ರಕ್ಷಿಸಬೇಕು ಎಂಬ ಹಕ್ಕೋತ್ತಾಯ ಮಂಡಿಸಿದರು.

‘ಬಿಗಿಯಾದ ಕಾನೂನು, ನಿಯಮಗಳ ಅತಿಯಾದ ಏರಿಕೆ, ಡಿಸ್ಕೌಂಟ್ ವ್ಯಾಪಾರದಿಂದ ವ್ಯವಹಾರಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಸಾಕಷ್ಟು ಬಾರಿ ಕೇಂದ್ರಕ್ಕೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಅನಿವಾರ್ಯವಾಗಿ ಸಂಘ ಮುಷ್ಕರಕ್ಕೆ ಕರೆ ನೀಡಿದೆ. ಆದರೆ ಜನರ, ವ್ಯಾಪಾರಸ್ಥರ ಹಿತದೃಷ್ಟಿಯಿಂದ ಕೇವಲ ನೈತಿಕ ಬೆಂಬಲ ನೀಡಲಾಗುತ್ತಿದೆ’ ಎಂದು ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಆರ್. ಚಂದ್ರಮೋಹನ್ ರೆಡ್ಡಿ ತಿಳಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಓಂಕಾರಮೂರ್ತಿ, ಉಪಾಧ್ಯಕ್ಷರಾದ ಕೆ.ಎಂ. ನಾಗರಾಜ್, ಎಸ್. ವೀರೇಶ್, ಖಜಾಂಚಿ ಎಚ್. ಲೋಹಿತೇಶ್, ಸಂಘಟನಾ ಕಾರ್ಯದರ್ಶಿ ಡಿ.ಬಿ. ಕುಮಾರ್, ಸಹ ಕಾರ್ಯದರ್ಶಿಗಳಾದ ಬಿ.ಟಿ. ಬಸವರಾಜ್, ಕೆ.ಎಸ್. ಅಶೋಕ್ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-44-33037082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.