ಚಿತ್ರದುರ್ಗ: ಕೇದಾರನಾಥಕ್ಕೆ ತೆರಳಿದ್ದ ಜಿಲ್ಲೆಯ ಮಹಿಳಾ ಯಾತ್ರಿಕರು ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಪಾಯಕ್ಕೆ ಸಿಲುಕಿದ್ದು, ರಕ್ಷಣೆಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬಿಜೆಪಿ ಮುಖಂಡರಾದ ರತ್ನಮ್ಮ, ಅಂಬಿಕಾ, ಗೀತಾ ಮತ್ತು ಇತರರು ವಾರದ ಹಿಂದೆ ಯಾತ್ರೆಗೆ ತೆರಳಿದ್ದರು. ಕೇದಾರನಾಥದಿಂದ 30 ಕಿ.ಮೀ ದೂರದಲ್ಲಿ ಇರುವಾಗ ಗುಡ್ಡ ಕುಸಿತ ಉಂಟಾಗಿದೆ. ಇದರಿಂದಾಗಿ ಕೇದಾರನಾಥಕ್ಕೆ ತೆರಳಲು ಆಗದೆ, ರಾಜ್ಯಕ್ಕೆ ಹಿಂತಿರುಗಲೂ ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ.
‘ಯಾತ್ರಿಕರು ಕೇದಾರನಾಥದಲ್ಲಿ ಸಿಲುಕಿರುವ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಮಾತನಾಡಿದ್ದೇನೆ. ಮರಳಿ ಕರೆತರುವ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಂಗಳವಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.