ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗದಲ್ಲಿ ಸಮವಸ್ತ್ರದಲ್ಲಿ ಮದ್ಯ ಸೇವಿಸಿದ ಕಾನ್‌ಸ್ಟೆಬಲ್

Last Updated 5 ಮೇ 2020, 7:59 IST
ಅಕ್ಷರ ಗಾತ್ರ

ಚಿತ್ರದುರ್ಗ: ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ಸಮವಸ್ತ್ರದಲ್ಲಿಯೇ ಮದ್ಯ ಸೇವಿಸಿ ಸ್ನೇಹಿತರೊಂದಿಗೆ ಸಂತೋಷ ಕೂಟ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿರುವ ಪೊಲೀಸ್ ಕಾನ್ಸ್ಟೆಬಲ್ ರಾಜು ಚೌವ್ಹಾಣ್ ಎಂದು ಗುರುತಿಸಲಾಗಿದೆ. ಇವರು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಚಿತ್ರದುರ್ಗ ತಾಲೂಕಿನ ಪಲ್ಲವಗೆರೆ ಗ್ರಾಮದ ಜಮೀನಿನಲ್ಲಿ ಪಾರ್ಟಿ ನಡೆದಿದೆ. ಪಲ್ಲವಗೆರೆ ಬೀಟ್ ಕರ್ತವ್ಯಕ್ಕೆ ಇವರನ್ನು ನಿಯೋಜಿಸಲಾಗಿತ್ತು.

ಸೋಮವಾರ ಮಧ್ಯಾಹ್ನ ಸ್ನೇಹಿತರ ಜೊತೆ ಸೇರಿ ಮದ್ಯ ಸೇವನೆ ಮಾಡಿದ್ದಾರೆ. ಕುಡಿದ ಅಮಲಿನಲ್ಲಿ ಕಾನೂನು ಪಾಠ ಮಾಡಿದ್ದಾರೆ. ನಿವೃತ್ತ ಯೋಧರಾಗಿದ್ದ ಇವರು, 2017ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT