ಚಿತ್ರದುರ್ಗ: ‘ಮುಂಗಾರು ಹಂಗಾಮಿನಲ್ಲಿ ರೈತರಿಗೆ ವಿತರಿಸುವ ಬಿತ್ತನೆ ಬೀಜಗಳ ಗುಣಮಟ್ಟ ಉತ್ತಮವಾಗಿರಬೇಕು. ಕೃಷಿ ಇಲಾಖೆಯಿಂದ ವಿತರಿಸುವ ಬಿತ್ತನೆಬೀಜ ಮಾತ್ರವಲ್ಲದೇ ಖಾಸಗಿ ಡೀಲರ್ಗಳ ಬಳಿ ಲಭ್ಯವಿರುವ ಬೀಜಗಳ ಗುಣಮಟ್ಟವೂ ಚೆನ್ನಾಗಿರಬೇಕು. ಮೊಳಕೆ ಒಡೆಯುವ ಸಾಮರ್ಥ್ಯದ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಿದ ಬಳಿಕವೇ ಪೂರೈಸಬೇಕು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸರಬರಾಜು ಸಿದ್ಧತೆ ಕುರಿತ ಜಿಲ್ಲಾಮಟ್ಟದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.

‘ಮುಕ್ತ ಮಾರುಕಟ್ಟೆಯಲ್ಲಿ ಕಳಪೆ ಬಿತ್ತನೆಬೀಜ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರೈತರಿಗೆ ನಷ್ಟ ಉಂಟಾಗದಂತೆ ತಡೆಯಲು ಜಾಗೃತರಾಗಿರಬೇಕು. ಈ ಹಿಂದೆ ಕಳಪೆ ಬೀಜ ಮಾರಾಟದ ಕುರಿತ ದೂರುಗಳು ಬಂದಿದ್ದು, ಈ ಬಾರಿ ಅಂತಹ ಯಾವುದೇ ದೂರುಗಳಿಗೆ ಆಸ್ಪದ ನೀಡಬಾರದು’ ಎಂದು ಹೇಳಿದರು.

‘ಯಾವ ತಾಲ್ಲೂಕಿನಲ್ಲಿ ಎಷ್ಟು ಪ್ರಮಾಣದ ಬಿತ್ತನೆ ಬೀಜಗಳು ಖಾಸಗಿಯವರಿಂದ ಮತ್ತು ಇಲಾಖೆಯಿಂದ ವಿತರಣೆಯಾಗುತ್ತಿವೆ. ರೈತರು ಹೊರಗಿನಿಂದ ಯಾವೆಲ್ಲಾ ಬೀಜಗಳನ್ನು ತರುತ್ತಿದ್ದಾರೆ ಎಂಬ ನಿಖರವಾದ ಅಂಕಿ-ಅಂಶಗಳ ದಾಖಲೆಯನ್ನು ಕೃಷಿ ಅಧಿಕಾರಿಗಳು ಹೊಂದಿರಬೇಕು. ಫಸಲು ಬಾರದಿದ್ದಾಗ ರೈತರು ಆಕ್ಷೇಪಣೆ ಎತ್ತಿದರೆ ಸೂಕ್ತ ತಾಂತ್ರಿಕ ವಿವರಣೆ ನೀಡಲು ಈ ಅಂಕಿ–ಅಂಶ ಸಹಕಾರಿಯಾಗಲಿವೆ’ ಎಂದರು.

‘ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಕೃತಕ ಅಭಾವ ಸೃಷ್ಟಿಯಾಗದಂತೆ ಜಾಗ್ರತೆ ವಹಿಸಬೇಕು. ರೈತರಲ್ಲಿ ಅನಗತ್ಯ ಭೀತಿ ಉಂಟುಮಾಡಿ ದಾಸ್ತಾನು ಮಾಡಿಕೊಳ್ಳುವ ಪರಿಸ್ಥಿತಿ ಬರಬಾರದು. ವಿತರಕರು ನಿಗದಿತ ದರದಲ್ಲಿಯೇ ರಸಗೊಬ್ಬರ ಪೂರೈಸುತ್ತಿದ್ದಾರೆಯೇ, ಗುರಿ ತಲುಪಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು’ ಎಂದು ತಹಶೀಲ್ದಾರ್ಗಳಿಗೆ ಸೂಚಿಸಿದರು.

‘ಪೂರ್ವ ಮುಂಗಾರಿನಲ್ಲಿ 25,000 ದಿಂದ 30,000 ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ ಬಿತ್ತನೆ ನಿರೀಕ್ಷೆ ಇದೆ. 95,000 ದಿಂದ 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ, 95,000 ದಿಂದ 1.15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ ನಿರೀಕ್ಷೆ ಇದೆ. ರಾಗಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿರುವುದರಿಂದ ಕಳೆದ ವರ್ಷ 58,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಈ ಬಾರಿ ರಾಗಿ ಬಿತ್ತನೆ ಪ್ರದೇಶ ಮತ್ತಷ್ಟು ಹೆಚ್ಚಾಗುವ ಸಂಭವವಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬಿತ್ತನೆ ಪ್ರಾರಂಭವಾಗಿದೆ. ಜಿಲ್ಲೆಯ ಹವಾಮಾನಕ್ಕೆ ಹೊಂದಿಕೊಳ್ಳುವಂತೆ 130 ರಿಂದ 140 ದಿನಗಳ ಅವಧಿಯ ತೊಗರಿ ತಳಿಯನ್ನು ಈ ವರ್ಷವೂ ಮುಂದುವರಿಸಲಾಗುವುದು’ ಎಂದರು.

ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಂ.ಬಾಬು, ಕೃಷಿ ಇಲಾಖೆ ಚಿತ್ರದುರ್ಗ ವಿಭಾಗದ ಉಪನಿರ್ದೇಶಕ ಕೆ.ಎಸ್.ಶಿವಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-947036060

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.