ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಕ್ತಹೀನತೆ ತಡೆಗಟ್ಟಲು ಪೌಷ್ಟಿಕ ಆಹಾರ ಸೇವಿಸಿ: ಸಿ. ಹರಿಪ್ರಸಾದ್

ನೇರಲಗುಂಟೆಯಲ್ಲಿ ಪೋಷಣ್ ಅಭಿಯಾನ್‌ ಮಾಸಾಚರಣೆ
Published : 6 ಸೆಪ್ಟೆಂಬರ್ 2024, 15:23 IST
Last Updated : 6 ಸೆಪ್ಟೆಂಬರ್ 2024, 15:23 IST
ಫಾಲೋ ಮಾಡಿ
Comments

ನಾಯಕನಹಟ್ಟಿ: ಇತ್ತೀಚನ ದಿನಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆ ಹೆಚ್ಚಾಗುತ್ತಿದ್ದು, ಇದರಿಂದ ರಕ್ತ ಹೀನತೆಯಂತಹ ಗಂಭೀರ ಸಮಸ್ಯೆ ತಲೆದೋರುತ್ತಿದೆ ಎಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕರಿ ಸಿ. ಹರಿಪ್ರಸಾದ್ ತಿಳಿಸಿದರು.

ಹೋಬಳಿಯ ನೇರಲಗುಂಟೆ ಗ್ರಾಮದ ಅಂಗನವಾಡಿಯಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ನಡೆದ ಪೋಷಣ್ ಅಭಿಯಾನ್‌ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚಳ್ಳಕೆರೆ ತಾಲ್ಲೂಕಿನಲ್ಲಿ ಗರ್ಭಿಣಿಯರು, ಬಾಣಂತಿಯರು ಮತ್ತು ಶಿಶುಮರಣ ಪ್ರಮಾಣ ಶೇ 1ರಷ್ಟಿದ್ದು, ಅದನ್ನು ಸಂಪೂರ್ಣ ಕಡಿಮೆ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೋಷಣ್ ಅಭಿಯಾನ್‌ ಕಾರ್ಯಕ್ರಮದ ಮೂಲಕ ಅಪೌಷ್ಠಿಕತೆಯ ದುಷ್ಪರಿಣಾಮಗಳು ಮತ್ತು ಪೌಷ್ಠಿಕತೆಯ ಅನುಕೂಲಗಳನ್ನು ಬಗ್ಗೆ ತಿಳಿಸಿಕೊಡುರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಹೇಳಿದರು.

ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ ಮೂಲಕ ಗುಣಮಟ್ ಮತ್ತು ಪೌಷ್ಟಿಕ ಆಹಾರ ನೀಡುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ, ಸೊಪ್ಪು, ಹಸಿ ತರಕಾರಿ, ಹಣ್ಣುಗಳು, ಹಾಲು, ಮೊಟ್ಟೆ, ಮೊಳಕೆ ಕಾಳುಗಳನ್ನು ಸೇವಿಸಬೇಕು ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಡಿ.ತಿಪ್ಪೇಸ್ವಾಮಿ, ಚನ್ನಕೇಶವ, ಹಿರಿಯ ಆರೋಗ್ಯ ನಿರೀಕ್ಷಕ ಎಂ.ಶೇಷಾದ್ರಿ, ಮೇಲ್ವಿಚಾರಕಿ ಆರ್.ನಾಗರತ್ನಮ್ಮ, ಸಮುದಾಯ ಆರೋಗ್ಯಾಧಿಕಾರಿ ಸುಶ್ಮಿತಾ, ಸಂಯೋಜಕ ಪ್ರತಾಪ್‌ ಸಿಂಗ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೀರನಾಯಕ, ತಿಪ್ಪೇಸ್ವಾಮಿ, ಅಂಗನವಾಡಿ ಸಿಬ್ಬಂದಿ ಮಹಾಂತಮ್ಮ, ಸೌಮ್ಯ, ಪದ್ಮ, ವಿಮಲಾಕ್ಷಿ, ಹೊನ್ನೂರಮ್ಮ, ಮಂಜುಳ, ಮಮತಾ, ಅನಸೂಯಮ್ಮ, ನಾಗವೇಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT