ಚಿತ್ರದುರ್ಗ: ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಕಾರಣ ಖಾಸಗಿ ಬಸ್ ಪ್ರಯಾಣ ದರವನ್ನು ಏರಿಸಲು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘ ಮಂಗಳವಾರ ನಿರ್ಣಯ ಕೈಗೊಂಡಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಲ್ಲಿ ಮಂಗಳವಾರ ನಡೆದ ಸಂಘದ ಸಭೆಯಲ್ಲಿ ದರ ಏರಿಕೆ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

‘ವಾಹನಗಳ ಬಿಡಿ ಭಾಗಗಳ ಬೆಲೆ ಗಗನಕ್ಕೆ ಏರಿದೆ. ಬಸ್ಗಳನ್ನು ಓಡಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರು ನಮ್ಮ ಬಸ್ಗಳಲ್ಲಿ ಪ್ರಯಾಣಿಸುತ್ತಿಲ್ಲ. ಆರ್ಟಿಒ ಕಚೇರಿಯಲ್ಲಿ ಎಲ್ಲಾ ರೀತಿಯ ಶುಲ್ಕವನ್ನು ನೂರರಷ್ಟು ಹೆಚ್ಚಿಸಲಾಗಿದೆ. ಇದರಿಂದ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದು ಸಂಘದ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಬೇಸರ ವ್ಯಕ್ತಪಡಿಸಿದರು.

‘ಯಾವುದೇ ರೀತಿಯಲ್ಲೂ ತೆರಿಗೆ ಶುಲ್ಕ ಕಡಿಮೆ ಮಾಡಲು ಸಹಕರಿಸಲಿಲ್ಲ. ಈ ಹಿಂದೆ ಸರ್ಕಾರಿ ಬಸ್ಗಳ ಪ್ರಯಾಣ ದರ ಹೆಚ್ಚಳವಾದಾಗಲೂ ನಾವು ಹಳೇ ದರದಲ್ಲಿಯೇ ಬಸ್ಗಳನ್ನು ಓಡಿಸಿದ್ದೇವೆ. ಇದರಿಂದ ಪ್ರತಿನಿತ್ಯ ಒಂದು ಬಸ್ಗೆ ಸಾವಿರಾರು ರೂಪಾಯಿ ಹೊರೆಯಾಗುತ್ತಿದೆ. ಹೀಗಾಗಿ ಅನಿವಾರ್ಯವಾಗಿ ಪ್ರಯಾಣ ದರ ಏರಿಕೆ ಮಾಡಲು ತೀರ್ಮಾನಿಸಲಾಗಿದೆ’ ಎಂದರು.

ಖಾಸಗಿ ಬಸ್ ಮಾಲೀಕರ ಸಂಘದ ಕಾರ್ಯದರ್ಶಿ ಜಿ.ಬಿ. ಶೇಖರ್, ಉಪಾಧ್ಯಕ್ಷ ಇ.ವಿ. ಅಜ್ಜಪ್ಪ, ಖಜಾಂಚಿ ಎಸ್.ವಿ. ನಾಗರಾಜ್, ಸಿದ್ದರಾಮೇಶ್, ವಸಂತ, ಪವನ್, ಅಬ್ಬುಬಕ್ಕರ್ ಸಿದ್ದಿಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-44-2113034859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.