ಚಿತ್ರದುರ್ಗ: ‘ಜಿಲ್ಲೆಯಲ್ಲಿ ಬೆಳೆ ನಷ್ಟ ಅನುಭವಿಸಿದ ಅರ್ಹ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು. ಬೆಳೆ ವಿಮೆ ಹಾಗೂ ಬೆಳೆ ಪರಿಹಾರದ ಹಣ ಪಾವತಿಗೆ ಕ್ರಮವಹಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲೆಯ ರೈತರ ಕುಂದು–ಕೊರತೆ ನಿವಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಬೆಳೆ ಕಟಾವು ಪ್ರಯೋಗ ಸಮರ್ಪಕವಾಗಿ ನಡೆಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು. ಬೆಳೆ ಜಂಟಿ ಸಮೀಕ್ಷೆ, ಮಧ್ಯಂತರ ಬೆಳೆ ಪರಿಹಾರ ಮಾಹಿತಿ ಕುರಿತು ರೈತರೊಂದಿಗೆ ಚರ್ಚಿಸಿ, ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಪರಿಹರಿಸಬೇಕು’ ಎಂದು ಸೂಚಿಸಿದರು.

‘ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಬೆಳೆನಷ್ಟ ಅನುಭವಿಸಿದ ಜಿಲ್ಲೆಯ 769 ರೈತರಿಗೆ ₹1.09 ಕೋಟಿ ಪರಿಹಾರ ಮೊತ್ತವನ್ನು ಈಗಾಗಲೇ ಅವರ ಖಾತೆಗೆ ಜಮೆ ಮಾಡಲಾಗಿದೆ. ತಾಂತ್ರಿಕ ಕಾರಣಗಳಿಂದ ಕೆಲವು ರೈತರಿಗೆ ಹಣ ಪಾವತಿಯಾಗಿಲ್ಲ. ತಾಂತ್ರಿಕ ಸಮಸ್ಯೆ ಬಗೆಹರಿಸಿ, ಸಂಬಂಧಪಟ್ಟ ರೈತರಿಗೆ ಬೆಳೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗಿದೆ’ ಎಂದರು.

‘ಜಿಲ್ಲೆಯಲ್ಲಿ 139 ಹೊಸ ಕಂದಾಯ ಗ್ರಾಮಗಳ ಘೋಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಕಂದಾಯ ಗ್ರಾಮಗಳ ಘೋಷಣೆ ಆದ ನಂತರ ಮನೆಗಳ ಹಕ್ಕು ಪತ್ರ ಹಾಗೂ ಇ-ಸ್ವತ್ತು ವಿತರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ’ ಎಂದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಮಾತನಾಡಿ, ‘ತಾಲ್ಲೂಕಿನ ದ್ಯಾಮವ್ವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಈರುಳ್ಳಿ ಬೆಳೆ ಬೆಳೆಯಲಾಗಿದೆ. ಕಳೆದ ಆಗಸ್ಟ್ನಲ್ಲಿ ಸುರಿದ ಮಳೆಯಿಂದಾಗಿ ಬಹಳಷ್ಟು ರೈತರು ನಷ್ಟ ಅನುಭವಿಸಿದ್ದಾರೆ. ಈ ಭಾಗದಲ್ಲಿ ಕೆಲವು ರೈತರಿಗೆ ಮಾತ್ರ ಬೆಳೆ ಪರಿಹಾರ ನೀಡಲಾಗಿದ್ದು, ಅರ್ಹರಿಗೆ ಪರಿಹಾರ ದೊರತಿಲ್ಲ. ಬೆಳೆನಷ್ಟ ಅನುಭವಿಸಿದ ರೈತರಿಗೆ ಅನ್ಯಾಯವಾಗಬಾರದು’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ದೇವರಾಜ್, ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಮಾರ್ಗಸೂಚಿ ಅನ್ವಯ ಬೆಳೆ ಪರಿಹಾರ ವಿತರಿಸಲಾಗಿದೆ. ದ್ಯಾಮವ್ವನಹಳ್ಳಿ ಪಂಚಾಯಿತಿಯಲ್ಲಿ 32 ರೈತರಿಗೆ ಬೆಳೆ ಪರಿಹಾರ ವಿತರಿಸಲಾಗಿದೆ. ತಾಲ್ಲೂಕಿನಲ್ಲಿ 1,130 ರೈತರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದು, ಇದರಲ್ಲಿ 450 ರೈತರಿಗೆ ಪರಿಹಾರ ಪಾವತಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

‘ಬೆಳೆ ಪರಿಹಾರಕ್ಕೆ ಅರ್ಹರಾದ ರೈತರು ಹಾಗೂ ಅನರ್ಹರ ಪಟ್ಟಿಯನ್ನು ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ಪರಿಹಾರ ಬಾರದ ರೈತರಿಗೆ ಹಿಂಬರಹದ ಪತ್ರದ ಮೂಲಕ ರೈತರಿಗೆ ಮಾಹಿತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ರೈತ ಮುಖಂಡ ತಿಪ್ಪೇಸ್ವಾಮಿ ಮಾತನಾಡಿ ‘ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕ್ಷೇತ್ರಮಟ್ಟದಲ್ಲಿ ಸರಿಯಾಗಿ ಕಾರ್ಯನಿರ್ವಹಿಸಿದರೆ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದರು.

‘ಬೆಳೆ ನಷ್ಟ ಅನುಭವಿಸಿದ ಪ್ರತಿಯೊಬ್ಬ ರೈತರಿಗೂ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ದೊರೆಯಬೇಕು. ಬೆಳೆ ವಿಮೆ ಕಟ್ಟಿಸಿಕೊಂಡ ವಿಮಾ ಕಂಪನಿಗಳು ಹಾಗೂ ಪ್ರತಿನಿಧಿಗಳು ರೈತರ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ’ ಎಂದು ರೈತ ಮುಖಂಡರಾದ ಹೊರಕೇರಪ್ಪ, ಬಸವರೆಡ್ಡಿ, ಕೆ.ಪಿ.ಭೂತಯ್ಯ, ರೆಡ್ಡಿಹಳ್ಳಿ ವೀರಣ್ಣ ದೂರಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ.ಸವಿತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.