ಚಿತ್ರದುರ್ಗ: ‘ಗ್ರಾಮೀಣ ಭಾಗದ ಶೈಕ್ಷಣಿಕ ಪ್ರಗತಿಗಾಗಿ ರೆಡ್ಡಿ ಜನಸಂಘ ಸಹಾಯ ಹಸ್ತ ಚಾಚುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹಾಯಧನ, ಪ್ರತಿಭಾ ಪುರಸ್ಕಾರ ಮುಂತಾದ ಚಟುವಟಿಕೆ ನಡೆಸಲಾಗುತ್ತಿದೆ’ ಎಂದು ರೆಡ್ಡಿ ಜನಸಂಘದ ಅಧ್ಯಕ್ಷ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

ನಗರದ ಕಮ್ಮರೆಡ್ಡಿ ಸಮುದಾಯ ಭವನದ ಆವರಣದಲ್ಲಿ ಗುರುವಾರ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಕೆಪಿಎಸ್ ಶಾಲೆಗೆ ₹ 41 ಲಕ್ಷದ ಮೌಲ್ಯದ 2 ಬಸ್ಗಳನ್ನು ಹಸ್ತಾಂತರ ಮಾಡಿ ಅವರು ಮಾತನಾಡಿದರು.

‘ಮರಡಿಹಳ್ಳಿ ಗ್ರಾಮದಲ್ಲಿ ಕೆಪಿಎಸ್ ಶಾಲೆ ಸ್ಥಾಪನೆಯಾದ ನಂತರ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಮಕ್ಕಳು ಶಾಲೆಗೆ ಬರುತ್ತಾರೆ. ಅವರ ಅನುಕೂಲಕ್ಕಾಗಿ 2 ಮಿನಿ ಬಸ್ ಒದಗಿಸಲಾಗಿದೆ. ಗ್ರಾಮದಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಕೂಡ ಸಾಕಷ್ಟು ಚಟುವಟಿಕೆ ನಡೆಸುತ್ತಿದ್ದು ಅವರೇ ಬಸ್ಗಳನ್ನು ನಿರ್ವಹಣೆ ಮಾಡಲಿದ್ದಾರೆ’ ಎಂದರು.

‘ನಮ್ಮ ಸಂಘದ ಬೈಲಾ ಪ್ರಕಾರ ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಳಿಗೆ ಸಹಾಯ ಮಾಡಲು ಅವಕಾಶವಿದೆ. ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಸಾರ್ವಜನಿಕರಿಗೆ ಸಹಾಯ ಮಾಡಿದ್ದೇವೆ. ಪ್ರಾಕೃತಿಕ ವಿಕೋಪದ ಸಂದರ್ಭದಲ್ಲೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುಗೆ ನೀಡಿದ್ದೇವೆ. ಜೊತೆಗೆ ಮಕ್ಕಳ ಶಿಕ್ಷಣಕ್ಕೆ ಅಗತ್ಯವಾಗಿರುವ ಶಾಲಾ ಕೊಠಡಿ, ಉದ್ಯಾನ ಸೌಲಭ್ಯ ಒದಗಿಸುತ್ತಿದ್ದೇವೆ’ ಎಂದು ಹೇಳಿದರು.

‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಮ್ಮ ಹಿರಿಯರು ನಗರದ ಬಿ.ಡಿ.ರಸ್ತೆಯಲ್ಲಿ ಹಾಸ್ಟೆಲ್ ನಿರ್ಮಿಸಿದ್ದರು. ದಾವಣಗೆರೆಯಲ್ಲಿರುವ ಸಂಘದ ನಿವೇಶನದಲ್ಲಿ ₹ 10 ಕೋಟಿ ವೆಚ್ಚದ ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಚಳ್ಳಕೆರೆಯಲ್ಲಿ ಸಂಘದ ಕಟ್ಟಡವನ್ನು ನವೀಕರಿಸಲಾಗುತ್ತಿದೆ’ ಎಂದು ಹೇಳಿದರು.

ಸಂಘದ ಉಪಾಧ್ಯಕ್ಷ ಎಂ.ಕೆ.ಅನಂತರೆಡ್ಡಿ, ಕಾರ್ಯದರ್ಶಿ ಜೆ.ಪರಶುರಾಮ್, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಸಿದ್ದಾರ್ಥಗುಂಡಾರ್ಫಿ, ವಕೀಲರಾದ ಡಿ.ಕೆ.ಶೀಲಾ, ದಿಲೀಪ್, ದಾವಣಗೆರೆಯ ರವೀಂದ್ರರೆಡ್ಡಿ, ಖಜಾಂಚಿ ಜಿ.ವೈ.ಸುರೇಶ್, ಸದಸ್ಯರಾದ ಎಸ್.ಎನ್.ಹರೀಶ್, ವಿ.ಆರ್.ಮಂಜುನಾಥ್, ಪಿ.ಚಂದ್ರಾರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-44-13651888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.