ಚಿತ್ರದುರ್ಗ: ತಾಲ್ಲೂಕಿನ ತಮಟಕಲ್ಲು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ– 48ರಲ್ಲಿ ಗುರುವಾರ ನಡೆದ ಲಾರಿ, ಕಾರು ಹಾಗೂ ಬೈಕ್ ನಡುವಣ ಸರಣಿ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಆಲಘಟ್ಟ ಗ್ರಾಮದ ಗೋವಿಂದಪ್ಪ(45), ಬಸವರಾಜಪ್ಪ(50) ಮೃತಪಟ್ಟವರು. ಕಾರು ಹಾಗೂ ಲಾರಿ ಒಂದಕ್ಕೊಂದು ಗುದ್ದಿಕೊಂಡು ಬೈಕ್ಗೆ ಡಿಕ್ಕಿಯಾದ ಕಾರಣ ನೆಲಕ್ಕೆ ಬಿದ್ದ ಬೈಕ್ ಸವಾರರು ಮೃತಪಟ್ಟಿದ್ದಾರೆ. ಘಟನೆಯ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ ನಂತರ ವಾಹನ ಸಂಚಾರ ಸಹಜ ಸ್ಥಿತಿಗೆ ಬಂತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-44-1645383467

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.