ಚಿತ್ರದುರ್ಗ: ‘ಹೆಣ್ಣು ಮಕ್ಕಳ ಆರೋಗ್ಯ ರಕ್ಷಣೆಗೆ ಸರ್ಕಾರ ಜಾರಿಗೆ ತಂದಿರುವ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್ಪಿವಿ) ಲಸಿಕಾ ಕಾರ್ಯಕ್ರಮ ಜಿಲ್ಲೆಯಲ್ಲಿ ನೂರರಷ್ಟು ಸಾಧನೆ ಆಗಬೇಕು. ಇದಕ್ಕೆ ಶಿಕ್ಷಕರು ಮತ್ತು ಪೋಷಕರು ಸಕ್ರಿಯವಾಗಿ ಕೈಜೋಡಿಸಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್. ಮಂಜುನಾಥ್ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶನಿವಾರ ಪ್ರೌಢಾಶಾಲಾ ಮುಖ್ಯ ಶಿಕ್ಷಕರಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಎಚ್ಪಿವಿ ಲಸಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಜಿಲ್ಲೆಯಾದ್ಯಂತ 8 ಮತ್ತು 9ನೇ ತರಗತಿಯ 23,565 ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲು ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಸರ್ಕಾರಿ, ಅನುದಾನಿತ, ಅನುದಾನರಹಿತ, ನವೋದಯ ಹಾಗೂ ಸಿಬಿಎಸ್ಇ, ಐಸಿಎಸ್ಇ ಸೇರಿದಂತೆ ಎಲ್ಲಾ ಶಾಲೆಗಳಲ್ಲಿ ಓದುತ್ತಿರುವ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ’ ಎಂದರು.

‘ಲಸಿಕೆಯ ಮಹತ್ವದ ಕುರಿತು ಪೋಷಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮೇ 25 ರಿಂದ 30 ರವರೆಗೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ವಿಶೇಷ ಸಭೆ ನಡೆಸಬೇಕು. ಲಸಿಕೆಯಿಂದಾಗುವ ಪ್ರಯೋಜನಗಳು ಮತ್ತು ಅದರ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಸೂಚಿಸಿದರು.

‘ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್ಪಿವಿ ಲಸಿಕಾ ಅಭಿಯಾನ ಯಶಸ್ವಿಗೊಳಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಲಸಿಕೆಗಳ ಬಗ್ಗೆ ಜಾಗೃತಿ ಹೆಚ್ಚಾಗಿದ್ದರೂ, ಈ ಲಸಿಕೆಯ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರದ ಅಗತ್ಯವಿದೆ’ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಡಿ.ಎಂ. ಅಭಿನವ್ ತಿಳಿಸಿದರು.

‘ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್ನಿಂದ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಲಸಿಕಾ ಅಭಿಯಾನ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಗೊಳಿಸಲು ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಒಟ್ಟಾಗಿ ಶ್ರಮಿಸಬೇಕಿದೆ. ಗರ್ಭಕಂಠದ ಕ್ಯಾನ್ಸರ್ಅನ್ನು ಆರಂಭಿಕ ಹಂತದಲ್ಲಿಯೇ ತಡೆಗಟ್ಟಲು ಲಸಿಕೆ ಅತ್ಯಂತ ಯಶಸ್ವಿಯಾಗಿದೆ’ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಡಿವೈಎಸ್ಪಿ ಹನುಮಂತಪ್ಪ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಭಾಗ್ಯಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರೆಡ್ಡಿ, ಗೌರಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-44-1013889444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.