ಸಿರಿಗೆರೆ (ಚಿತ್ರದುರ್ಗ): ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಭರಮಸಾಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

‘ಶಿಕ್ಷಕ ನಮ್ಮನ್ನು ಕೊಠಡಿಗೆ ಕರೆಸಿಕೊಂಡು ಮೈ ಮುಟ್ಟುವುದು, ಮುತ್ತು ಕೊಡುವುದು ಮಾಡುತ್ತಾರೆ’ ಎಂದು ವಿದ್ಯಾರ್ಥಿನಿಯರು ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು. ಇದನ್ನು ಅವರು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಶಿಕ್ಷಕನನ್ನು ಅಮಾನತು ಮಾಡಿದ್ದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿತ್ತು.

ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.