ಚಿತ್ರದುರ್ಗ: ‘ಪ್ರಸ್ತುತ ದಿನಗಳಲ್ಲಿ ಮನೆಯಲ್ಲಿ ಯಾರಾದರೂ ಜನಪ್ರತಿನಿಧಿಗಳಿದ್ದರೆ ಅವರ ಹೆಸರು ಹೇಳಿಕೊಂಡು ಸಂಬಂಧಿಕರು ತಮ್ಮ ಕೆಲಸ ಮಾಡಿಸಿಕೊಳ್ಳುವುದನ್ನು ಕಾಣುತ್ತೇವೆ. ಆದರೆ, ಮಗ ಕೆ.ಎಸ್.ನವೀನ್ ವಿಧಾನಪರಿಷತ್ ಸದಸ್ಯರಾದರೂ ಎಲ್ಲಿಯೂ ಅವರ ಹೆಸರು ಬಳಸಿಕೊಳ್ಳದ ಕೀರ್ತಿ ವೀರಶೈವ ಸಮಾಜದ ಮಾಜಿ ಅಧ್ಯಕ್ಷ ಕೆ.ಆರ್.ಶಿವಪ್ರಕಾಶ್ಗೆ ಸಲ್ಲುತ್ತದೆ’ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.

ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಈಚೆಗೆ ಆಯೋಜಿಸಿದ್ದ ಕೆ.ಆರ್.ಶಿವಪ್ರಕಾಶ್ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸರಳ, ಸಜ್ಜನಿಕೆಯ ವ್ಯಕ್ತಿಯಾದ ಶಿವಪ್ರಕಾಶ್ ಅವರು ಜೀವನ ಪೂರ್ತಿ ಯಾರಿಗೂ ಕೆಟ್ಟದ್ದನ್ನು ಬಯಸಲಿಲ್ಲ. ತಮ್ಮ ಮಕ್ಕಳಿಗೆ ಸರಿಯಾದ ಮಾರ್ಗದರ್ಶ ನೀಡಿದ್ದಾರೆ ಎಂಬುದಕ್ಕೆ ಕೆ.ಎಸ್.ನವೀನ್ ಸಾಕ್ಷಿಯಾಗಿದ್ದಾರೆ’ ಎಂದರು.

ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಎಚ್.ಏಕಾಂತಯ್ಯ, ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-242434830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.