ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಮುರುಘಾ ಮಠದ ಆಡಳಿತ ಸಮಿತಿಗೆ ಶಿವಯೋಗಿ ಕಳಸದ ಅಧ್ಯಕ್ಷ

Published 1 ಮಾರ್ಚ್ 2024, 16:11 IST
Last Updated 1 ಮಾರ್ಚ್ 2024, 16:11 IST
ಅಕ್ಷರ ಗಾತ್ರ

ಚಿತ್ರದುರ್ಗ: ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಮುರುಘಾ ಮಠದ ಟ್ರಸ್ಟ್‌ ಮತ್ತು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಸಮಿತಿ ರಚಿಸಿರುವ ರಾಜ್ಯ ಸರ್ಕಾರ, ನಿವೃತ್ತ ಐಎಎಸ್‌ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಶಿವಮೂರ್ತಿ ಶರಣರು ಮಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಹಾಗೂ ಆಡಳಿತದ ಭಾಗವಾಗಿರಬಾರದು ಎಂದು ಸೂಚಿಸಿದ್ದ ಸುಪ್ರೀಂ ಕೋರ್ಟ್‌, ಆಡಳಿತ ನೋಡಿಕೊಳ್ಳಲು ಮೂರು ದಿನಗಳಲ್ಲಿ ಸಮಿತಿ ರಚಿಸಬೇಕು ಎಂಬ ನಿರ್ದೇಶನವನ್ನು ಫೆ.27ರಂದು ರಾಜ್ಯ ಸರ್ಕಾರಕ್ಕೆ ನೀಡಿತ್ತು. ಆಡಳಿತ ಸಮಿತಿಗೆ ಕಳಸದ ಅಧ್ಯಕ್ಷರಾಗಿದ್ದು, ಸದಸ್ಯರನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಕಂದಾಯ ಇಲಾಖೆ ಆದೇಶದಲ್ಲಿ ಮಾಹಿತಿ ನೀಡಿದೆ.

ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT