ಸಿರಿಗೆರೆ: ಸಮೀಪದ ಕಡ್ಲೇಗುದ್ದು ಗ್ರಾಮದ ಬಳಿಯ ಐತಿಹಾಸಿಕ ಸಿದ್ಧನಗುಂಡಿ ಕ್ಷೇತ್ರವನ್ನು ಆಂಜನೇಯ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿಗಳು ಬುಧವಾರ ಸ್ವಚ್ಛಗೊಳಿಸಿದರು.

ವೇದಾಂತ ಲಿಮಿಟೆಡ್ ಸಹಯೋಗದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

‘ಪರಿಸರ ನಮ್ಮ ಉಸಿರು, ನಮ್ಮ ಹಸಿರು. ಆಧುನಿಕತೆ ನೆಪದಲ್ಲಿ ಅಮೂಲ್ಯ ಗಿಡಮರಗಳನ್ನು ಕಡಿಯಲಾಗುತ್ತಿದ್ದು, ಜೀವಸಂಕುಲ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಎನ್. ಮಹೇಶ್ ಹೇಳಿದರು.

ಪರಿಸರದ ಬಗ್ಗೆ ವಿಶೇಷ ಕಾಳಜಿ ಇಟ್ಟುಕೊಂಡ ವೇದಾಂತ ಸಂಸ್ಥೆಯು ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

‘ನಮ್ಮ ಸಂಸ್ಥೆಯು ಪ್ರತಿವರ್ಷ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಿದೆ. ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ನಿರಂತರವಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ಪರಿಸರ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ವೇದಾಂತ ಅಧಿಕಾರಿ ಶ್ರೀ ಅಭಿಷೇಕ್ ಶರ್ಮಾ ತಿಳಿಸಿದರು.

ವಿದ್ಯಾರ್ಥಿಗಳು, ಶಿಕ್ಷಕರು, ವೇದಾಂತ ಸಂಸ್ಥೆಯ ಸಿಬ್ಬಂದಿ ಕೈಯಲ್ಲಿ ಪೊರಕೆ, ಗುದ್ದಲಿ, ಪುಟ್ಟಿ ಹಿಡಿದು ಇಡೀ ಪುಣ್ಯಕ್ಷೇತ್ರವನ್ನು ಸ್ವಚ್ಛಗೊಳಿಸಿ ಪರಿಸರ ಕಾಳಜಿ ಮೆರೆದರು.

ಶಿಕ್ಷಕರಾದ ನಟರಾಜ್ ನಾಗರಾಜ್, ಸಂಸ್ಥೆಯ ಅಧಿಕಾರಿ ರಶ್ಮಿ ಹಾಗೂ ಸಿಬ್ಬಂದಿ ಮಂಜುನಾಥ್, ಅಭಿಷೇಕ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-44-394616322

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.