ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಳಲ್ಕೆರೆ | ಸಿದ್ದರಾಮಯ್ಯ ಕೆಳಗಿಳಿಸಲು ಹುನ್ನಾರ: ಆರೋಪ

ರಾಜ್ಯಪಾಲರಿಗೆ ಗೋ ಬ್ಯಾಕ್ ಘೋಷಣೆ
Published : 18 ಆಗಸ್ಟ್ 2024, 14:20 IST
Last Updated : 18 ಆಗಸ್ಟ್ 2024, 14:20 IST
ಫಾಲೋ ಮಾಡಿ
Comments

ಹೊಳಲ್ಕೆರೆ: ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ರಾಜ್ಯಪಾಲರ ಅಸ್ತ್ರ ಬಳಸುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಆರೋಪಿಸಿದರು.

ಪಟ್ಟಣದಲ್ಲಿ ಭಾನುವಾರ ರಾಜ್ಯಪಾಲರ ವಿರುದ್ಧ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಅಧಿಕಾರ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಮುಡಾ ಹಗರಣದ ಆರೋಪ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಅವರ ಪತ್ನಿ ಜಮೀನನ್ನು ಸಹೋದರನಿಂದ ದಾನವಾಗಿ ಪಡೆದಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರ ಕೈವಾಡ ಇಲ್ಲ. ಬೇಕಾದರೆ ನಿವೇಶನಗಳನ್ನು ವಾಪಸ್ ಪಡೆಯಲಿ. ಆದರೆ, ಬಿಜೆಪಿಯವರು ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನಕಾರರು ರಾಜ್ಯಪಾಲ ಥಾವರ ಚಂದ್ ಗೆಹಲೋತ್, ಅಮಿತ್ ಷಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಟ್ಟಣದ ಮುಖ್ಯವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಪ್ರಯತ್ನಿಸಿದಾಗ ಪೊಲೀಸರು ತಡೆದರು.

ಕಾಂಗ್ರೆಸ್ ಮುಖಂಡರಾದ ಬಿ.ಎನ್.ಚಂದ್ರಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್, ಕಿರಣ್ ಕುಮಾರ್, ಪಿ.ಆರ್.ಶಿವಕುಮಾರ್, ಸಜಿಲ್, ಬಿ.ಗಂಗಾಧರ್, ಲೋಕೇಶ್ ನಾಯ್ಕ, ಗೋಡೆಮನೆ ಹನುಮಂತಪ್ಪ, ಪಾಡಿಗಟ್ಟೆ ಸುರೇಶ್, ಕಿರಣ್, ಲೋಹಿತ್ ಕುಮಾರ್, ಮಧು ಪಾಲೇಗೌಡ, ರಂಗಸ್ವಾಮಿ, ಅಂಬಿಕಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT