ಚಿತ್ರದುರ್ಗ: ‘ಕಚೇರಿ ಕೆಲಸದ ಒತ್ತಡದಲ್ಲಿರುವ ಸಿಬ್ಬಂದಿಗೆ ಕ್ರೀಡಾಕೂಟಗಳು ಹೊಸ ಚೈತನ್ಯ ನೀಡುತ್ತವೆ. ಸದೃಢ ದೇಹದಿಂದ ಮಾತ್ರ ಸದೃಢ ಮನಸ್ಸು ಹೊಂದಲು ಸಾಧ್ಯ’ ಎಂದು ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕ ಎಚ್.ಟಿ.ಅಶೋಕ್ ತಿಳಿಸಿದರು.

ಇಲ್ಲಿನ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಖಜಾನೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಕೆಲಸದ ಒತ್ತಡದ ನಡುವೆ ಸಿಬ್ಬಂದಿ ಸಕ್ರಿಯವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ನೆಮ್ಮದಿ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ’ ಎಂದರು.

ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್, ಡಿಸ್ಕಸ್ ಥ್ರೋ, ಶಾಟ್ಪಟ್, 100 ಮೀಟರ್ ಓಟ ಹಾಗೂ ಒಳಾಂಗಣ ಕ್ರೀಡೆಗಳಾದ ಚೆಸ್ ಮತ್ತು ಕೇರಂ ಸ್ಪರ್ಧೆಗಳು ನಡೆದವು.

ಸ್ಪರ್ಧಾ ವಿಜೇತರಿಗೆ ಪದಕ, ಪಾರಿತೋಷಕ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು. ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಏಳು ಕೋಟಿ, ನರಸಿಂಹಮೂರ್ತಿ, ದೈಹಿಕ ಶಿಕ್ಷಣ ಶಿಕ್ಷಕರಾದ ರಮೇಶ್, ಮದನ, ತಿಪ್ಪೇಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-44-2039786658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.